ADVERTISEMENT

ಮತಗಟ್ಟೆ ಸಮೀಕ್ಷೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ವೀಕೆಂಡ್ ಮಜಾ ಮಾಡಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 13 ಮೇ 2018, 8:33 IST
Last Updated 13 ಮೇ 2018, 8:33 IST
ಮತಗಟ್ಟೆ ಸಮೀಕ್ಷೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ವೀಕೆಂಡ್ ಮಜಾ ಮಾಡಿ: ಸಿದ್ದರಾಮಯ್ಯ
ಮತಗಟ್ಟೆ ಸಮೀಕ್ಷೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ವೀಕೆಂಡ್ ಮಜಾ ಮಾಡಿ: ಸಿದ್ದರಾಮಯ್ಯ   

ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಮತದಾನದ ಬೆನ್ನಲ್ಲೇ ಹೊರಬಿದ್ದ ಹೆಚ್ಚಿನ ಮತಗಟ್ಟೆಸಮೀಕ್ಷೆಗಳು ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಗಟ್ಟೆ ಸಮೀಕ್ಷೆ ಎಂಬುದು ಎರಡು ದಿನಗಳ ಮನರಂಜನಾ ಕಾರ್ಯಕ್ರಮ. ಈ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ನೀವು ನಿಮ್ಮ ವಾರಾಂತ್ಯವನ್ನು ಖುಷಿಯಾಗಿ ಕಳೆಯಿರಿ ಎಂದು ತಮ್ಮ ಕಾರ್ಯಕರ್ತರಿಗೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.