ADVERTISEMENT

ಮತದಾನದ ಮಹತ್ವ ಸಾರುವ ವರದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 19:30 IST
Last Updated 20 ಏಪ್ರಿಲ್ 2018, 19:30 IST
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಲ್ಲಿ (ಎಫ್‌ಕೆಸಿಸಿಐ) ಶುಕ್ರವಾರ ಆಯೋಜಿಸಿದ್ದ ಸಂವಾದದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರು ವಿದ್ಯುನ್ಮಾನ ಮತಯಂತ್ರ ಹಾಗೂ ಮತ ಖಾತರಿ ಯಂತ್ರದ (ವಿ.ವಿ ಪ್ಯಾಟ್‌) ಕುರಿತು ವಿವರಿಸಿದರು. ಎಫ್‌ಕೆಸಿಸಿಐ ಅಧ್ಯಕ್ಷ ಕೆ.ರವಿ ಇದ್ದಾರೆ –ಪ್ರಜಾವಾಣಿ ಚಿತ್ರ
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಲ್ಲಿ (ಎಫ್‌ಕೆಸಿಸಿಐ) ಶುಕ್ರವಾರ ಆಯೋಜಿಸಿದ್ದ ಸಂವಾದದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರು ವಿದ್ಯುನ್ಮಾನ ಮತಯಂತ್ರ ಹಾಗೂ ಮತ ಖಾತರಿ ಯಂತ್ರದ (ವಿ.ವಿ ಪ್ಯಾಟ್‌) ಕುರಿತು ವಿವರಿಸಿದರು. ಎಫ್‌ಕೆಸಿಸಿಐ ಅಧ್ಯಕ್ಷ ಕೆ.ರವಿ ಇದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಮತದಾನದ ಪ್ರಮಾಣ ಹೆಚ್ಚಿಸಲು ವಿನೂತನ ಪ್ರಯೋಗಗಳನ್ನು ನಡೆಸುತ್ತಿರುವ ಚುನಾವಣಾ ಆಯೋಗ, ಜನಾಭಿಪ್ರಾಯ ಸಂಗ್ರಹಿಸಿ ಸಂಶೋಧನಾ ವರದಿಯೊಂದನ್ನು ಸಿದ್ಧಪಡಿಸಿದೆ.

ವಿಕಾಸಸೌಧದಲ್ಲಿ ಶುಕ್ರವಾರ ಆ ವರದಿ ಬಿಡುಗಡೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್, ‘70 ಸಾವಿರ ಜನರ ಅಭಿಪ್ರಾಯಗಳ ಜತೆಗೆ, 119 ಸಭೆಗಳಲ್ಲಿ ಚರ್ಚೆಗೆ ಬಂದ ವಿಷಯಗಳನ್ನು ಆಧರಿಸಿ  ವರದಿ ಸಿದ್ಧಪಡಿಸಿದ್ದೇವೆ. ಜನರನ್ನು ಮತ ಕೇಂದ್ರಗಳತ್ತ ಸೆಳೆಯುವ ಪ್ರಯತ್ನ ಇದಾಗಿದೆ’ ಎಂದು ಹೇಳಿದರು.

‘ಈ ಹಿಂದೆ 40 ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಮತದಾನ ನಡೆದಿದ್ದು, ಆ ಭಾಗಗಳಲ್ಲಿ ಯಾವ ರೀತಿ ಜಾಗೃತಿ ಮೂಡಿಸಬಹುದು ಎಂಬ ಮಾರ್ಗಸೂಚಿಗಳು ವರದಿಯಲ್ಲಿವೆ. ಚುನಾವಣೆಗೂ ಮುನ್ನ ಮನೆ ಮನೆಗೂ ತೆರಳಿ ಮಾರ್ಗಸೂಚಿ ಕರಪತ್ರ ಹಂಚಿ ಅರಿವು ಮೂಡಿಸುತ್ತೇವೆ’ ಎಂದರು.

ADVERTISEMENT

‘ಆನ್‌ಲೈನ್ ಮತನದಾನಕ್ಕೆ ಪ್ರಾತಿನಿಧ್ಯ ನೀಡಬೇಕು, ಯುವ ಮತದಾರರನ್ನು ನೋಂದಾಯಿಸುವ ಜವಾಬ್ದಾರಿಯನ್ನು ಶೈಕ್ಷಣಿಕ ಸಂಸ್ಥೆಗಳಿಗೆ ವಹಿಸಬೇಕು.. ಸೇರಿದಂತೆ ಹಲವು ಸಲಹೆಗಳು ಜನರಿಂದ ವ್ಯಕ್ತವಾಗಿವೆ’ ಎಂದು ವಿವರಿಸಿದರು.

ವಿಚಾರಣೆ ನಡೆಸಿ ಕ್ರಮ: ‘ಕೆಲ ಅಭ್ಯರ್ಥಿಗಳು ಹೆಚ್ಚು ಬೆಂಬಲಿಗರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ ಎಂಬ ದೂರುಗಳು ಬಂದಿವೆ. ಆ ಬಗ್ಗೆ ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಆರ್.ಅಶೋಕ, ರಾಮಲಿಂಗಾರೆಡ್ಡಿ ನಾಮಪತ್ರ ಸಲ್ಲಿಸುವಾಗಲೂ ಹೆಚ್ಚು ಬೆಂಬಲಿಗರಿದ್ದರಲ್ಲವೇ ಎಂದು ಮಾಧ್ಯಮದವರು ಪ್ರಶ್ನಿಸಿದಾಗ, ‘ಆ ವಿಚಾರ ನಮ್ಮ ಅರಿವಿಗೆ ಬಂದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.