ADVERTISEMENT

ಮತದಾನ ಗೋಪ್ಯತೆ ನಿಯಮ ಉಲ್ಲಂಘನೆ: ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 11 ಮೇ 2018, 19:30 IST
Last Updated 11 ಮೇ 2018, 19:30 IST

ಚಿಕ್ಕಮಗಳೂರು: ಮತದಾನ ಗೋಪ್ಯತೆ ನಿಯಮ ಉಲ್ಲಂಘನೆ ಪ್ರಕರಣದಲ್ಲಿ, ಜಿಲ್ಲೆಯ ನರಸಿಂಹರಾಪುರದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭೋಗೇಶಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಭೋಗೇಶಪ್ಪ ಅವರು ತಾವು ಚಲಾಯಿಸಿದ ಅಂಚೆ ಮತಪತ್ರದ ಫೋಟೊ ತೆಗೆದು ವ್ಯಾಟ್ಸ್‌ ಆ್ಯಪ್‌ನಲ್ಲಿ ಹಾಕಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಭೋಗೇಶಪ್ಪ ಅವರು ಪ್ರಜಾಪ್ರತಿನಿಧಿ ಕಾಯ್ದೆ (1951ರ ಕಲಂ 128) ಮತದಾನ ಗೋಪ್ಯತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಈ ಕುರಿತು ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ವರದಿ ನೀಡಿದ್ದಾರೆ. ಇಲಾಖೆ ವಿಚಾರಣೆ ಕಾಯ್ದಿರಿಸಿ ಅವರನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.