ADVERTISEMENT

‘ಮಳೆಗಾಲದಲ್ಲಿ ನೀರು ನುಗ್ಗುತ್ತದೆ’

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2018, 19:30 IST
Last Updated 14 ಏಪ್ರಿಲ್ 2018, 19:30 IST
‘ಮಳೆಗಾಲದಲ್ಲಿ ನೀರು ನುಗ್ಗುತ್ತದೆ’
‘ಮಳೆಗಾಲದಲ್ಲಿ ನೀರು ನುಗ್ಗುತ್ತದೆ’   

ಕಳೆದ 17 ವರ್ಷಗಳಿಂದ ನಾನು ಈ ಪ್ರದೇಶದಲ್ಲಿ ವಾಸಿಸುತ್ತಿದ್ದೇನೆ.

ಎಲೆಕ್ಟ್ರಾನಿಕ್ ಸಿಟಿ ಮತ್ತು ಜಿಗಣಿ ಕೈಗಾರಿಕಾ ಪ್ರದೇಶಕ್ಕೆ ಬೊಮ್ಮನಹಳ್ಳಿಯು ಹತ್ತಿರವಾಗಿರುವುದರಿಂದ ಸಹಜವಾಗಿ ಹೆಚ್ಚು ಜನದಟ್ಟಣೆ ಹೊಂದಿದೆ. ಹೊಸ ಉದ್ಯಾನಗಳು, ಆಟದ ಮೈದಾನ, ರಸ್ತೆ ಡಾಂಬರೀಕರಣ, ಬೆಂಗಳೂರು ಒನ್‍ನಂತಹ ಸೌಕರ್ಯವನ್ನು ಈ ಕ್ಷೇತ್ರಕ್ಕೆ ಒದಗಿಸಲಾಗಿದೆ. ಜೊತೆಗೆ, ಕ್ಷೇತ್ರದ ವ್ಯಾಪ್ತಿಯಲ್ಲಿನ ಹಲವು ಕೆರೆಗಳನ್ನು ಕೂಡ ಪುನರುಜ್ಜೀವನಗೊಳಿಸಲಾಗಿದೆ.

ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಇದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಇವರು ಸುತ್ತಮುತ್ತಲಿನ ಜನರ ಜೊತೆ ಒಳ್ಳೆಯ ಹೊಂದಿದ್ದಾರೆ.

ADVERTISEMENT

ಆದರೆ, ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತಿದೆ. ಇದರಿಂದ ಜನರು ಪ್ರತಿ ಮಳೆಗಾಲದಲ್ಲಿ ಬಹಳ ತೊಂದರೆ ಅನುಭವಿಸುವಂತಾಗಿದೆ. ಈ ಸಮಸ್ಯೆ ಬಹಳ ವರ್ಷಗಳಿಂದಲೂ ಇದೆ. ಆದರೆ ಇದುವರೆಗೂ ಈ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.ಈ ಕ್ಷೇತ್ರದ ಕೆಲವು ಭಾಗಗಳಿಗೆ ಬಸ್ ಸೌಕರ್ಯವಿಲ್ಲ ಮತ್ತು ಕಸ ವಿಲೇವಾರಿಯ ಸಮಸ್ಯೆಯೂ ಇರುವುದರಿಂದ ಜನರು ಪರದಾಡುವಂತಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ.

→ಬಿ.ಎ. ಮನೋಜ್, ಅರಕೆರೆ ನಿವಾಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.