ADVERTISEMENT

ಮಹದಾಯಿ ವಿವಾದ - ಬಿಜೆಪಿಯಿಂದ ಮತದಾರರ ಬ್ಲ್ಯಾಕ್‌ಮೇಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2018, 9:49 IST
Last Updated 27 ಫೆಬ್ರುವರಿ 2018, 9:49 IST
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ)   

ಬೆಂಗಳೂರು: ಮಹದಾಯಿ ವಿವಾದ ಪರಿಹರಿಸುವ ವಿಷಯವಾಗಿ ಮತದಾರರನ್ನು ಬಿಜೆಪಿ ಬ್ಲ್ಯಾಕ್‌ಮೇಲ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಹದಾಯಿ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಅಮಿತ್‌ ಶಾ ಮತ್ತೊಮ್ಮೆ ಸುಳ್ಳು ಹೇಳಿದ್ದಾರೆ. ಡಿಸೆಂಬರ್ 15ರ ಒಳಗಾಗಿ ಮಹದಾಯಿ ವಿವಾದ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದರು. ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ. ಪ್ರಧಾನಿ ಮಧ್ಯಪ್ರವೇಶಿಸಬೇಕಿತ್ತು. ಅವರೂ ಇಚ್ಛಾಶಕ್ತಿ ಪ್ರದರ್ಶಿಸಲಿಲ್ಲ. ಈಗ, ನೀವು ಮತ ನೀಡದಿದ್ದರೆ ಸಮಸ್ಯೆ ಬಗೆಹರಿಸುವುದಿಲ್ಲ ಎಂಬುದಾಗಿ ಬಿಜೆಪಿಯವರು ಮತದಾರರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT