ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2018, 10:24 IST
Last Updated 20 ಏಪ್ರಿಲ್ 2018, 10:24 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಶುಕ್ರವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.

ಇಲ್ಲಿನ ಚಾಮುಂಡಿಬೆಟ್ಟ ಮತ್ತು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ ಬಳಿಕ ಬೆಂಬಲಿಗರೊಂದಿಗೆ ಮಿನಿ ವಿಧಾನಸೌಧದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿ ಕಚೇರಿಗೆ ಬಂದು ಉಮೇದುವಾರಿಕೆ ಸಲ್ಲಿಸಿದರು.

ಬೆಳಿಗ್ಗೆ ಹುಟ್ಟೂರಾದ ಸಿದ್ದರಾಮನಹುಂಡಿಗೆ ತೆರಳಿದ್ದ ಮುಖ್ಯಮಂತ್ರಿ ಅವರು ಸಿದ್ದರಾಮೇಶ್ವರ ಸ್ವಾಮಿ ಮತ್ತು ನಾಡದೇವತೆ ಆದಿಶಕ್ತಿ ಚಾಮುಂಡಮ್ಮ ದೇವಿಗೆ ಪೂಜೆ ಸಲ್ಲಿಸಿದರು.

ADVERTISEMENT

ಜಿ.ಟಿ.ದೇವೇಗೌಡ ನಾಮಪತ್ರ ಸಲ್ಲಿಕೆ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲಿರುವ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ ಪೂಜೆ ಸಲ್ಲಿಸಿದ ಅವರು ಬೆಂಬಲಿಗರ ಜತೆ ಮೆರವಣಿಗೆಯಲ್ಲಿ ಬಂದು ಮಿನಿ ವಿಧಾನಸೌಧದಲ್ಲಿರುವ ಕ್ಷೇತ್ರ ಚುನಾವಣಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.