ADVERTISEMENT

ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್ ಸಿಗ್ನಲ್‌

ಏಜೆನ್ಸೀಸ್
Published 17 ಮೇ 2018, 1:59 IST
Last Updated 17 ಮೇ 2018, 1:59 IST
ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್ ಸಿಗ್ನಲ್‌
ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್ ಸಿಗ್ನಲ್‌   

ನವದೆಹಲಿ: ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್ ಸಿಗ್ನಲ್‌ ನೀಡಿದ್ದು, ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾನೂನು ಹೋರಾಟಕ್ಕೆ ಹಿನ್ನಡೆಯಾಗಿದೆ.

ಸುಪ್ರೀಂ ಕೋರ್ಟ್‌ನ ಕೊಠಡಿ ಸಂಖ್ಯೆ 6ರಲ್ಲಿ ಮಧ್ಯರಾತ್ರಿ 1.45ಕ್ಕೆ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ, ಎಸ್.ಎ. ಬೋಬ್ಡೆ ಹಾಗೂ ಅಶೋಕ್ ಭೂಷಣ್‌ ಅವರಿದ್ದ ನ್ಯಾಯಪೀಠ ಕಾಂಗ್ರೆಸ್ ಮತ್ತು ಜೆಡಿಎಸ್‌ ಸಲ್ಲಿಸಿದ್ದ ಅರ್ಜಿಯ ವಿಚಾಣೆ ನಡೆಸಿತು. ಸತತವಾಗಿ 2 ಗಂಟೆಗಳ ವಿಚಾರಣೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.