ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಭವನ ತಲುಪಿದ್ದು, ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಅವಕಾಶ ಕೋರಲಿದ್ದಾರೆ.
ರಾಜ್ಯಪಾಲ ವಜುಬಾಯಿ ವಾಲಾ ಅವರು ಶಾಸಕರ ಭೇಟಿಗೆ 5:00ಕ್ಕೆ ಸಮಯ ನೀಡಿದ್ದರು. ಸಮಯಕ್ಕೂ ಮುನ್ನವೇ ರಾಜಭವನ ಬಳಿ ತಲುಪಿದ ಎಚ್.ಡಿ.ಕುಮಾರಸ್ವಾಮಿ ಅವರ ಪ್ರವೇಶಕ್ಕೆ ಪೊಲೀಸರು ಅವಕಾಶ ನೀಡದೆ, ಪ್ರವೇಶ ದ್ವಾರದಲ್ಲಿಯೇ ತಡೆದರು.
(ರಾಜಭವನದ ಸಮೀಪ ಶಾಸಕರು– ಚಿತ್ರ ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್)
ಎಲ್ಲ ಶಾಸಕರಿಗೂ ಭೇಟಿ ಅನುಮತಿ ನಿರಾಕರಿಸಿರುವ ರಾಜ್ಯಪಾಲರು, ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ತಲಾ ಹತ್ತು ಶಾಸಕರಿಗೆ ಮಾತ್ರ ಅವಕಾಶ ನೀಡಿದ್ದಾರೆ. ರಾಜಭವನದೊಳಗೆ ಎಲ್ಲ ಶಾಸಕರಿಗೂ ಪ್ರವೇಶ ನಿರಾಕರಿಸಿದ್ದನ್ನು ವಿರೋಧಿಸಿ ಪ್ರತಿಭಟನೆಯೂ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.