ADVERTISEMENT

‘ಲಿಂಗಾಯತ ಚುನಾವಣಾ ವಿಷಯವೇ ಅಲ್ಲ’: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 19:30 IST
Last Updated 19 ಏಪ್ರಿಲ್ 2018, 19:30 IST
ಶಿಕಾರಿಪುರದಲ್ಲಿ ಗುರುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನಾಮಪತ್ರ ಸಲ್ಲಿಸುವ ಮುನ್ನ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬೆಂಬಲಿಗರು.
ಶಿಕಾರಿಪುರದಲ್ಲಿ ಗುರುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ನಾಮಪತ್ರ ಸಲ್ಲಿಸುವ ಮುನ್ನ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬೆಂಬಲಿಗರು.   

ಶಿವಮೊಗ್ಗ/ಶಿಕಾರಿಪುರ: ವೀರಶೈವ, ಲಿಂಗಾಯತ ಚುನಾವಣಾ ವಿಷಯವೇ ಅಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶಿಕಾರಿಪುರದಲ್ಲಿ ಗುರುವಾರ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಶಿಕಾರಿಪುರ ಕ್ಷೇತ್ರದ ಜನರು ಈ ಬಾರಿ ಶಾಸಕರನ್ನು ಆರಿಸುತ್ತಿಲ್ಲ. ಮುಖ್ಯಮಂತ್ರಿ ಆಯ್ಕೆ ಮಾಡುತ್ತಿದ್ದಾರೆ. ರಾಜ್ಯದ 150 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಚುನಾವಣೆ ನಂತರ ನಾನೇ ಈ ರಾಜ್ಯದ ಮುಖ್ಯಮಂತ್ರಿ’ ಎಂದರು.

ADVERTISEMENT

‘ಪ್ರತಿದಿನ ಐದರಿಂದ ಆರು ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇನೆ. ಮತದಾನ ಮುಗಿಯುವವರೆಗೂ ಹೆಲಿಕಾಪ್ಟರ್‌ನಲ್ಲಿ ತಿರುಗುತ್ತೇನೆ’ ಎಂದರು.

ಛತ್ತಿಸಗಡ ಮುಖ್ಯಮಂತ್ರಿ ರಮಣ್‌ ಸಿಂಗ್‌ ಮಾತನಾಡಿ, ‘ರಾಜ್ಯದ ಕಾಂಗ್ರೆಸ್‌ ಸರ್ಕಾರ ದಲಿತರು, ರೈತರು ಹಾಗೂ ಹಿಂದುಳಿದ ವರ್ಗದ ವಿರೋಧಿ. ಐದು ವರ್ಷಗಳಲ್ಲಿ ಇಡೀ ರಾಜ್ಯವನ್ನು ಲೂಟಿ ಮಾಡಿದೆ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.