ADVERTISEMENT

ವಿ.ವಿ.ಪ್ಯಾಟ್‌ ಪತ್ತೆ: ಆಯೋಗದಿಂದ ತನಿಖೆ

​ಪ್ರಜಾವಾಣಿ ವಾರ್ತೆ
Published 21 ಮೇ 2018, 19:30 IST
Last Updated 21 ಮೇ 2018, 19:30 IST

ಬೆಂಗಳೂರು: ವಿಜಯಪುರ ಜಿಲ್ಲೆ ಮನಗೂಳಿಯಲ್ಲಿ ವಿ.ವಿ.ಪ್ಯಾಟ್‌ ಯಂತ್ರಗಳ ಹೊರ ಕವಚಗಳು ಪತ್ತೆಯಾದ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

ಮನಗೂಳಿಯಲ್ಲಿ ಸಿಕ್ಕಿರುವ ವಿ.ವಿ.ಪ್ಯಾಟ್‌ಗಳಿಗೂ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಸಂಬಂಧವಿಲ್ಲ, ಆದರೂ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ವಿ.ವಿ.ಪ್ಯಾಟ್‌ಗಳ ಒಳಗೆ ಯಂತ್ರ ಇರಲಿಲ್ಲ. ಸಿಕ್ಕಿರುವುದು ಹೊರ ಕವಚ ಮಾತ್ರ. ಇವುಗಳ ಮೇಲೆ ಯುನೀಕ್‌ ಐ.ಡಿ ಕೋಡ್‌ ಕೂಡ ಇರುವುದಿಲ್ಲ. ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ADVERTISEMENT

ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕೇಂದ್ರ ಚುನಾವಣಾ ಆಯುಕ್ತ ಓಂಪ್ರಕಾಶ್‌ ರಾವತ್‌ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.