ADVERTISEMENT

ಶಾಸಕ ಆನಂದ್‌ ಸಿಂಗ್‌ ವಿರುದ್ಧ ಬಿಜೆಪಿ ಇ.ಡಿ ಛೂ ಬಿಟ್ಟಿದೆ: ಕುಮಾರಸ್ವಾಮಿ ಗಂಭೀರ ಆರೋಪ

​ಪ್ರಜಾವಾಣಿ ವಾರ್ತೆ
Published 17 ಮೇ 2018, 5:57 IST
Last Updated 17 ಮೇ 2018, 5:57 IST
ಶಾಸಕ ಆನಂದ್‌ ಸಿಂಗ್‌ ವಿರುದ್ಧ ಬಿಜೆಪಿ ಇ.ಡಿ ಛೂ ಬಿಟ್ಟಿದೆ: ಕುಮಾರಸ್ವಾಮಿ ಗಂಭೀರ ಆರೋಪ
ಶಾಸಕ ಆನಂದ್‌ ಸಿಂಗ್‌ ವಿರುದ್ಧ ಬಿಜೆಪಿ ಇ.ಡಿ ಛೂ ಬಿಟ್ಟಿದೆ: ಕುಮಾರಸ್ವಾಮಿ ಗಂಭೀರ ಆರೋಪ   

ಬೆಂಗಳೂರು: ಬಿಜೆಪಿಯು ಶಾಸಕ ಆನಂದ್‌ ಸಿಂಗ್‌ ವಿರುದ್ಧ ಜಾರಿ ನಿರ್ದೇಶನಾಲಯವನ್ನು (ಇಡಿ) ಛೂ ಬಿಟ್ಟಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ನಗರದಲ್ಲಿ ಗುರುವಾರ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಂದಿನ ನಡೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು.

ಬಿಜೆಪಿಯ ದಮನಕಾರಿ ನೀತಿಯನ್ನು ಪ್ರತಿಭಟಿಸಬೇಕು ಎಂದ ಅವರು, ಬಿಜೆಪಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು 15 ದಿನ ಕಾಲಾವಕಾಶ ನೀಡಿರುವುದು ಏಕೆ? ಎಂದ ಅವರು ಪ್ರಶ್ನಿಸಿದರು.

ADVERTISEMENT

ಬಿಜೆಪಿಯಿಂದ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ಸಂವಿಧಾನಿಕ ಸಂಸ್ಥೆಗಳ ದುರುಪಯೋಗವಾಗುತ್ತಿದೆ ಎಂದು ಅವರು ಆಪಾದಿಸಿದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.