ADVERTISEMENT

ಸಿಂಗಾಪುರ್‌ಗೆ ಪ್ರಯಾಣಿಸಿದ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 13 ಮೇ 2018, 11:41 IST
Last Updated 13 ಮೇ 2018, 11:41 IST
ಕುಮಾರಸ್ವಾಮಿ (ಸಂಗ್ರಹ ಚಿತ್ರ)  ಕೃಪೆ: ಪಿಟಿಐ
ಕುಮಾರಸ್ವಾಮಿ (ಸಂಗ್ರಹ ಚಿತ್ರ) ಕೃಪೆ: ಪಿಟಿಐ   

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆದ ಮರುದಿನವೇ ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಕುಮಾರಸ್ವಾಮಿ ಅವರು ಸಿಂಗಾಪುರ್‌ಗೆ ಪ್ರಯಾಣಿಸಿದ್ದಾರೆ.

ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನ ಸಮೀಕ್ಷೆಗಳು ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿಲ್ಲವಾದರೂ, 26–38 ಕ್ಷೇತ್ರಗಳಲ್ಲಿ ಜಯ ಸಾಧಿಸಲಿರುವ ಜೆಡಿಎಸ್‌ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೇಳಿವೆ. ಇದರ ಬೆನ್ನಲ್ಲೇ ಕುಮಾರಸ್ವಾಮಿ ಸಿಂಗಾಪುರ್‌ಗೆ ಪ್ರಯಾಣಿಸಿದ್ದು, ಮತ ಎಣಿಕೆ ದಿನವಾದ ಮಂಗಳವಾರ ವಾಪಸ್ ಬರಲಿದ್ದಾರೆ.

ಕಾಂಗ್ರೆಸ್, ಬಿಜೆಪಿ ನೇತಾರರು ಕುಮಾರಸ್ವಾಮಿ ಮತ್ತು ದೇವೇಗೌಡರನ್ನು ಭೇಟಿಯಾಗಿದ್ದಾರೆ. ರಾಜಕೀಯ ಚರ್ಚೆಗಳಿಗಾಗಿ ಕುಮಾರಸ್ವಾಮಿ ಸಿಂಗಾಪುರ್‌ಗೆ ಹೋಗಿರಬಹುದು. ರಾಜಕೀಯ ಚರ್ಚೆಗಳು ಇಲ್ಲಿ ನಡೆದರೆ ಅದು ಮಾಧ್ಯಮಗಳಿಗೆ ಸೋರಿಕೆಯಾಗುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿಯವರ ಆಪ್ತರೊಬ್ಬರು ಹೇಳಿರುವುದಾಗಿ ನ್ಯೂಸ್ 18 ವರದಿ  ಮಾಡಿದೆ.

ADVERTISEMENT

ಅದೇ ವೇಳೆ ಈ ಬಗ್ಗೆ ಕೇಳಲು ಕುಮಾರಸ್ವಾಮಿ ಅವರಿಗೆ ಫೋನ್ ಮಾಡಿದರೆ, ನಾನು  ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.