ADVERTISEMENT

ಟಿಕೆಟ್ ಘೋಷಣೆ: ಜಾವಡೇಕರ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 9:06 IST
Last Updated 8 ಫೆಬ್ರುವರಿ 2018, 9:06 IST

ತುಮಕೂರು: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇ ಇರಲಿ, ಹಿರಿಯ ಮುಖಂಡರೇ ಇರಲಿ, ಟಿಕೆಟ್ ತಮಗೆ ಲಭಿಸುತ್ತದೆ ಎಂಬ ಆತ್ಮವಿಶ್ವಾಸ ಹೊಂದಿರುವವರೇ ಆಗಲಿ, ಯಾರೂ ಮುಂದಿನ ಚುನಾವಣೆಯಲ್ಲಿ ತಮಗೆ ಟಿಕೆಟ್ ಎಂದು ಎಲ್ಲೂ ಘೋಷಣೆ ಮಾಡಿಕೊಳ್ಳುವಂತಿಲ್ಲ’ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಎಚ್ಚರಿಕೆ ನೀಡಿದರು.

ಭಾನುವಾರ ನಗರದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ‘ರಾಜ್ಯ ಘಟಕದ ಅಧ್ಯಕ್ಷರೂ ಇಂಥವರಿಗೆ ಟಿಕೆಟ್ ಎಂದು ಘೋಷಣೆ ಮಾಡುವಂತಿಲ್ಲ. ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ತನ್ನದೇ ಆದ ಮಾನದಂಡಗಳನ್ನು ಪಕ್ಷ ಅನುಸರಿಸುತ್ತಿದೆ. ಗೆಲ್ಲಬಹುದಾದ ಅಭ್ಯರ್ಥಿಗಳ ಬಗ್ಗೆ ಸಮೀಕ್ಷೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ’ ಎಂದರು.

ಮನವಿ ಪತ್ರ: ‘ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಪಕ್ಷದ ಕಾರ್ಯಚಟುವಟಿಕೆಗಳಿಗೆ ನಮಗೆ ಆಹ್ವಾನ ನೀಡುತ್ತಿಲ್ಲ’ ಎಂದು ಕೆಲವು ಕಾರ್ಯಕರ್ತರು ಜಾವಡೇಕರ್‌ ಅವರಿಗೆ ಮನವಿ ಸಲ್ಲಿಸಿದರು. ಸಭೆಗೂ ಮುನ್ನ ಮುಖಂಡರಾದ ಜಿ.ಎಸ್.ಬಸವರಾಜ್ ಮತ್ತು ಎಸ್.ಶಿವಣ್ಣ ಜೊತೆ ಭಿನ್ನಮತ ಶಮನ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.