ADVERTISEMENT

‘ಅಲ್ಪಸಂಖ್ಯಾತರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ವಿಫಲ’

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 8:57 IST
Last Updated 8 ಫೆಬ್ರುವರಿ 2018, 8:57 IST
ಅಬ್ದುಲ್ ಅಜೀಂ
ಅಬ್ದುಲ್ ಅಜೀಂ   

ಹೊಸಕೋಟೆ: ಅಲ್ಪಸಂಖ್ಯಾತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಅಬ್ದುಲ್ ಅಜೀಂ ಆರೋಪಿಸಿದರು.

ಬಿಜೆಪಿ ಅಲ್ಪಸಂಖ್ಯಾರ ಸಮಾವೇಶದಲ್ಲಿ ಶನಿವಾರ ಮಾತನಾಡಿದರು.

ಅಲ್ಪಸಂಖ್ಯಾತರನ್ನು ವೋಟ್‌ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಪರಿಗಣಿಸಿದೆ. ಯಾವುದೇ ಸೌಲಭ್ಯಗಳನ್ನು ಅವರಿಗೆ ಕಲ್ಪಿಸಿಲ್ಲ. ಇದರಿಂದ ಬೇಸತ್ತಿರುವ ಅವರು ಬಿಜೆಪಿ ಪಕ್ಷವನ್ನು ಬೆಂಬಲಿಸಲು ಮುಂದಾಗಿದ್ದಾರೆ. ಉತ್ತರ ಪ್ರದೇಶ, ಗುಜರಾತ್‌ನ ಮುಸ್ಲಿಮರು ಪ್ರಾಬಲ್ಯ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿರುವುದೆ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಹೇಳಿದರು.

ADVERTISEMENT

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಚುನಾವಣೆ ದೃಷ್ಟಿಯಿಂದ ಅಲ್ಪಸಂಖ್ಯಾತರ ಪ್ರಕರಣಗಳನ್ನು ರದ್ದುಪಡಿಸಲು ಮುಂದಾಗಿದೆ ಎಂದು ದೂರಿದರು.

ಶಾಸಕ ಎಂಟಿಬಿ ನಾಗರಾಜ್ ದೌರ್ಜನ್ಯದಿಂದ ಬೇಸತ್ತಿರುವ ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಸೇರ್ಪಡೆಗೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಹೇಳಿದರು.

ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಸಿ.ಮಂಜುನಾಥ್, ‘ತಿರುಮಲಶೆಟ್ಟಿಹಳ್ಳಿ, ನಂದಗುಡಿ ಠಾಣೆಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಬಿಜೆಪಿ ಕಾರ್ಯಕರ್ತರ ಹೆಸರನ್ನು ರೌಡಿ ಪಟ್ಟಿಗೆ ಸೇರಿಸಲಾಗಿದೆ. ಪೊಲೀಸರ ಧೋರಣೆ ಖಂಡಿಸಿ ಠಾಣೆಗಳ ಮುಂದೆ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.