ADVERTISEMENT

ದ.ಕ.ಜಿಲ್ಲೆಯ ಚುನಾವಣಾ ಕಣಕ್ಕೆ ಹಿಂದೂ ಮಹಾಸಭಾ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 8:56 IST
Last Updated 8 ಫೆಬ್ರುವರಿ 2018, 8:56 IST

ಮಂಗಳೂರು: ಮುಂಬರುವ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕಡೆಗಳಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹಿಂದೂ ಮಹಾಸಭಾದ ರಾಜ್ಯ ಅಧ್ಯಕ್ಷ ಸುಬ್ರಹ್ಮಣ್ಯ ರಾಜು ತಿಳಿಸಿದ್ದಾರೆ.

ಶನಿವಾರ ಇಲ್ಲಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆಗಳಲ್ಲಿ ಒಟ್ಟು 150 ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ಸ್ಪರ್ಧಿಸಲಿದೆ. ಹಿಂದೂಗಳ ಮತ ಮುಖ್ಯವಲ್ಲ ಎಂಬ ರೀತಿಯಲ್ಲಿ ಕಾಂಗ್ರೆಸ್‌ ನಡೆದುಕೊಳ್ಳುತ್ತಿದೆ. ಕೋಮು ಗಲಭೆಯಲ್ಲಿ ಭಾಗವಹಿಸಿದ ಅಲ್ಪಸಂಖ್ಯಾತರ ಮೇಲಿನ ಪ್ರಕರಣಗಳನ್ನು ಇತ್ತೀಚೆಗೆ ಸರ್ಕಾರ ಹಿಂಪಡೆದುಕೊಂಡಿರುವುದು ಇದಕ್ಕೊಂದು ನಿದರ್ಶನ ಎಂದರು.

ಆಳ್ವಾಸ್‌ ಪ್ರಕರಣ: ಆಳ್ವಾಸ್‌ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು. ಪದೇ ಪದೇ ಆತ್ಮಹತ್ಯೆ ನಡೆಯುತ್ತಿರುವುದರ ಹಿಂದೆ ಯಾರದಾದರೂ ಕೈವಾಡ ಇದೆಯೇ, ಸಂಸ್ಥೆಯ ಹೆಸರು ಕೆಡಿಸಲು ಈ ರೀತಿ ಪಿತೂರಿ ನಡೆಸಲಾಗುತ್ತಿದೆಯೇ ಎಂಬ ವಿಷಯ ಬಹಿರಂಗ ಆಗಬೇಕಾದರೆ ಸಿಬಿಐ ತನಿಖೆ ಅಗತ್ಯ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.