ADVERTISEMENT

ಮಹಾಮಸ್ತಕಾಭಿಷೇಕಕ್ಕೆ ಕೇಂದ್ರ ಅನುದಾನ ನೀಡಿಲ್ಲ: ಆರೋಪ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2018, 8:52 IST
Last Updated 8 ಫೆಬ್ರುವರಿ 2018, 8:52 IST

ಶ್ರವಣಬೆಳಗೊಳ: ‘ಶ್ರೀಕ್ಷೇತ್ರ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಕೇಂದ್ರ ಸರ್ಕಾರ ನೆರವು ನೀಡಿಲ್ಲ’ ಎಂದು ಸಂಸದ ಎಚ್‌.ಡಿ. ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಶ್ರವಣಬೆಳಗೊಳದಲ್ಲಿ ಭಾನುವಾರ ಮುನಿಗಳ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಸ್ತೆ ಅಭಿವೃದ್ಧಿಗೆ ಸ್ವಲ್ಪಮಟ್ಟಿಗೆ ಅನುದಾನ ನೀಡಿದೆ ಅಷ್ಟೇ. ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಕೇಂದ್ರ ತಾತ್ಸಾರ ತೋರುತ್ತಿದೆ. ಆದರೆ, ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಜ್ಯ ಸರ್ಕಾರ ₹ 175 ಕೋಟಿ ಬಿಡುಗಡೆ ಮಾಡಿದೆ ಎಂದರು.

ಫೆ.7ರಂದು ಶ್ರವಣಬೆಳಗೊಳದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಮಹೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಕುರಿತು ಅವರು, ಸೋಮವಾರ ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸಿ, ರೈತರು ಎದುರಿಸುತ್ತಿರುವ ಸಮಸ್ಯೆ ಕುರಿತು ಚರ್ಚಿಸಲಾಗುವುದು. ನೋಡೋಣ, ಸಾಧ್ಯವಾದಲ್ಲಿ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಳ್ಳುವೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.