ADVERTISEMENT

‘ಡಿ‘ ಗ್ರೂಪ್‌ಗೆ ಗ್ರಾಮ ಸಹಾಯಕರು: ಕಾಗೋಡು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 19:30 IST
Last Updated 9 ಫೆಬ್ರುವರಿ 2018, 19:30 IST

ಬೆಂಗಳೂರು: ಕಂದಾಯ ಇಲಾಖೆ ಗ್ರಾಮ ಸಹಾಯಕರಿಗೆ ಗ್ರೂಪ್‌ ‘ಡಿ’ ನೌಕರರ ಹುದ್ದೆ ನೀಡಬೇಕೆಂಬ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಿಧಾನಸಭೆಗೆ ಶುಕ್ರವಾರ ತಿಳಿಸಿದರು.

ಗ್ರಾಮ ಸಹಾಯಕರು ಮುಷ್ಕರ ನಡೆಸುತ್ತಿರುವ ಕುರಿತು ಜೆಡಿಎಸ್‌ನ ಎನ್.ಎಚ್. ಕೋನರಡ್ಡಿ ಹಾಗೂ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌, ಸರ್ಕಾರದ ಗಮನ ಸೆಳೆದರು.

‘ಕಂದಾಯ ಇಲಾಖೆ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ನಡೆಸಿದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಲಾಗಿದೆ. ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಗ್ರಾಮ ಸಹಾಯಕರ ಪರಿಸ್ಥಿತಿ ಕುರಿತು ನನಗೂ ಸಹಾನುಭೂತಿ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿಗೆ ಮನವರಿಕೆ ಮಾಡಿದ್ದೇನೆ’ ಎಂದೂ ಕಾಗೋಡು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.