ADVERTISEMENT

ತೊಗರಿ ಖರೀದಿ ಕೇಂದ್ರ ಪುನರಾರಂಭ: ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2018, 19:30 IST
Last Updated 9 ಫೆಬ್ರುವರಿ 2018, 19:30 IST
ತೊಗರಿ ಬೇಳೆ ಖರೀದಿ ಕೇಂದ್ರ ಸ್ಥಗಿತಗೊಂಡಿದ್ದರೆ ಒಂದೆರಡು ದಿನಗಳಲ್ಲಿ ಪುನರಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ಶುಕ್ರವಾರ ತಿಳಿಸಿದರು.
ತೊಗರಿ ಬೇಳೆ ಖರೀದಿ ಕೇಂದ್ರ ಸ್ಥಗಿತಗೊಂಡಿದ್ದರೆ ಒಂದೆರಡು ದಿನಗಳಲ್ಲಿ ಪುನರಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ಶುಕ್ರವಾರ ತಿಳಿಸಿದರು.   

ಬೆಂಗಳೂರು: ತೊಗರಿ ಬೇಳೆ ಖರೀದಿ ಕೇಂದ್ರ ಸ್ಥಗಿತಗೊಂಡಿದ್ದರೆ ಒಂದೆರಡು ದಿನಗಳಲ್ಲಿ ಪುನರಾರಂಭ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ಶುಕ್ರವಾರ ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಬೇಳೆ ಖರೀದಿಸಲು ಕಲಬುರ್ಗಿ, ರಾಯಚೂರಿನಲ್ಲಿ ಆರಂಭಿಸಲಾಗಿದ್ದ ಖರೀದಿ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ದೂರಿದರು.

‘ಕೇಂದ್ರ ಸ್ಥಗಿತಗೊಳಿಸಿರುವ ಬಗ್ಗೆ ಗೊತ್ತಿಲ್ಲ. ಕೃಷಿ ಮಾರುಕಟ್ಟೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಈಗಲೇ ಆರಂಭ ಮಾಡಲು ಕಷ್ಟ. ಒಂದೆರಡು ದಿನ ಬೇಕಾಗಬಹುದು. ಆತಂಕ ಬೇಡ’ ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.