ADVERTISEMENT

‘ಹಣದಾಸೆಗೆ ದೇಶ ಮಾರಾಟ’

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2018, 20:13 IST
Last Updated 11 ಫೆಬ್ರುವರಿ 2018, 20:13 IST

ಬೆಂಗಳೂರು: ‘ಹಣದಾಸೆಗೆ ದೇಶವನ್ನು ಮಾರಾಟ ಮಾಡಲೂ ಕಾಂಗ್ರೆಸ್‌ ಪಕ್ಷ ಹಿಂಜರಿಯುವುದಿಲ್ಲ’ ಎಂದು ಜೆಡಿಎಸ್ ಪಕ್ಷದ ಡಿ.ಎ.ಗೋಪಾಲ್ ಟೀಕಿಸಿದರು.

ಕೆ.ಆರ್.ಪುರ ಸಮೀಪದ ಹೊರಮಾವು ಅಗರದಲ್ಲಿ ಆಯೋಜಿಸಿದ್ದ ಜೆಡಿಎಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ  ಉದ್ಘಾಟಿಸಿ ಅವರು ಮಾತನಾಡಿದರು.

‘ಜನಸಾಮಾನ್ಯರು ಕಟ್ಟುವ ತೆರಿಗೆಗೆ ನ್ಯಾಯ ಒದಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಮಾಜಿ ಸಚಿವರಾದ ಶ್ರೀನಿವಾಸ್ ಪ್ರಸಾದ್, ದಿವಗಂತ ಎ.ಕೃಷ್ಣಪ್ಪ ಮತ್ತು ಎಚ್.ವಿಶ್ವನಾಥ್ ಅವರಂತಹ ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷ ಹೊರಹಾಕುವ ಮೂಲಕ ಅವಮಾನಿಸಿದೆ. ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಲ್ಲಿ ನೆಲೆಯಿಲ್ಲ’ ಎಂದು ಹೇಳಿದರು.

ADVERTISEMENT

‘ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ಬಿಡುಗಡೆಯಾಗಿದರೂ ಸಹ ಡಾಂಬರು ಹಾಕಿಸಿರುವುದನ್ನು ಹೊರತುಪಡಿಸಿ ಶಾಶ್ವತ ಯೋಜನೆಯಂತಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.