ADVERTISEMENT

ಮೋದಿ, ಶಾ ವಿರುದ್ಧದ ಆರೋಪ: ಇಂದು ವಿಚಾರಣೆ

ಪಿಟಿಐ
Published 29 ಏಪ್ರಿಲ್ 2019, 20:13 IST
Last Updated 29 ಏಪ್ರಿಲ್ 2019, 20:13 IST
   

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಚುನಾವಣಾ ಸಭೆಗಳಲ್ಲಿ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸುತ್ತಿದ್ದಾರೆ’ ಎಂದು ಆರೋಪಿಸಿ ಕಾಂಗ್ರೆಸ್‌ ಸಂಸದೆ ಸುಶ್ಮಿತಾ ದೇವ್‌ ಅವರು ಸಲ್ಲಿಸಿದ ದೂರನ್ನು ಮಂಗಳವಾರ ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.

‘ಮೋದಿ ಮತ್ತು ಶಾ ಅವರು ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರೂ ಆಯೋಗವು ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಸುಶ್ಮಿತಾ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.