ದಾವಣಗೆರೆ: ಕಾಂಗ್ರೆಸಿಗರು ಲಿಂಗಾಯತರನ್ನು ಒಡೆಯುತ್ತಾರೆ ಎಂದು ಮೋದಿ ಹೇಳಿರುವುದು ಸರಿಯಲ್ಲ. ಲಿಂಗಾಯತರನ್ನು ಒಡೆಯುವವರು ಬಿಜೆಪಿಯಲ್ಲಿಯೂ ಇದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿರುಗೇಟು ನೀಡಿದರು.
‘ಕಾಂಗ್ರೆಸಿಗರು ಧರ್ಮ ಒಡೆಯುತ್ತಿದ್ದಾರೆ ಎಂದು ನಾನು ಹೇಳಲ್ಲ. ಯಾಕೆಂದರೆ ನಾನೊಬ್ಬ ಕಾಂಗ್ರೆಸಿಗ. ಬಿಜೆಪಿಯೂ ಅದೇ ಕೆಲಸವನ್ನು ಮಾಡುತ್ತಿದೆ. ಎರಡೂ ಪಕ್ಷಗಳಲ್ಲಿ ಅವರಿಗೆ ಬೇಕಾದಂತೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಲಿಂಗಾಯತರು ಎಚ್ಚರಿಕೆಯಿಂದ ಇರಬೇಕು’ ಎಂದು ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಅವರು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.