ADVERTISEMENT

ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ, ರಕ್ಷಣಾ ಸಚಿವೆ ನಿರ್ಮಲಾ ಉಪಸ್ಥಿತಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2019, 11:58 IST
Last Updated 26 ಮಾರ್ಚ್ 2019, 11:58 IST
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಜತೆಗಿದ್ದರು 
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಜತೆಗಿದ್ದರು    

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಶೋಭಾ ಜತೆಯಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಮೂಡಿಗೆರೆ ಶಾಸಕ ಕುಮಾರಸ್ವಾಮಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕಾಪು ಶಾಸಕ ಲಾಲಾಜಿ ಮೆಂಡನ್ ಜತೆಗಿದ್ದರು. ಶೋಭಾ ಅವರು ಶುಭ ಮುಹೂರ್ತವಿದ್ದ ಕಾರಣ ಮಾರ್ಚ್‌ 22 ರಂದು ಕೂಡ ನಾಮಪತ್ರ ಸಲ್ಲಿಸಿದ್ದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಶೋಭಾ ಕರಂದ್ಲಾಜೆ ‘ಚುನಾವಣೆ ಯುದ್ಧವಿದ್ದಂತೆ, ಬಿಜೆಪಿ ಕಾರ್ಯಕರ್ತರು ಸೇನಾನಿಗಳಿದ್ದಂತೆ. ಯುದ್ಧ ಗೆಲ್ಲುವ ವಿಶ್ವಾಸ ಇದೆ ಎಂದರು.

ADVERTISEMENT

ರಾಜ್ಯದಲ್ಲಿ 23ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ. ರಾಜ್ಯದ ಮತದಾರರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಕಚೇರಿ ಬಳಿ ಬಿಜೆಪಿ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.