ADVERTISEMENT

ಕೋಲಾರ: ಕ್ಷೇತ್ರದಲ್ಲಿ 31 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 3 ಮೇ 2019, 11:15 IST
Last Updated 3 ಮೇ 2019, 11:15 IST
ಪಿರಮಿಡ್‌ ಪಾರ್ಟಿ ಆಫ್‌ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಎನ್‌.ಎಂ.ಸರ್ವೇಶ್‌ ಕೋಲಾರದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಪಿರಮಿಡ್‌ ಪಾರ್ಟಿ ಆಫ್‌ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಎನ್‌.ಎಂ.ಸರ್ವೇಶ್‌ ಕೋಲಾರದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದರು.   

ಕೋಲಾರ: ಲೋಕಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ನಿಗದಿಪಡಿಸಿದ್ದ ಗಡುವು ಮಂಗಳವಾರಕ್ಕೆ ಅಂತ್ಯಗೊಂಡಿದ್ದು, ಕ್ಷೇತ್ರದಲ್ಲಿ ಒಟ್ಟಾರೆ 23 ಅಭ್ಯರ್ಥಿಗಳು 31 ನಾಮಪತ್ರ ಸಲ್ಲಿಸಿದ್ದಾರೆ.

ಚುನಾವಣಾ ಅಧಿಸೂಚನೆ ಪ್ರಕಟಗೊಂಡ ನಂತರ ಮಾರ್ಚ್‌ 19ರಿಂದ ಮಂಗಳವಾರದವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಆರ್‌ಪಿಐ, ಜೆಡಿಯು ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಕೆ.ಎಚ್.ಮುನಿಯಪ್ಪ 4 ಸೆಟ್‌ ನಾಮಪತ್ರ, ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ 3 ಸೆಟ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಎಸ್‌.ವೀರಯ್ಯ ಪಕ್ಷೇತರರಾಗಿ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ 2 ಸೆಟ್‌ ನಾಮಪತ್ರ ಸಲ್ಲಿಸಿದ್ದಾರೆ.

ADVERTISEMENT

ಉಳಿದಂತೆ ವಿ.ಎಂ.ರಮೇಶ್‌ಬಾಬು ಎಂಬುವರು ಪಕ್ಷೇತರರಾಗಿ ಮತ್ತು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ 2 ಪ್ರತ್ಯೇಕ ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ ಸಮಾಜ (ಬಿಎಸ್‌ಪಿ) ಪಕ್ಷದ ಅಭ್ಯರ್ಥಿಯಾಗಿ ಜಯಪ್ರಸಾದ್, ಜೆಡಿಯು ಅಭ್ಯರ್ಥಿಯಾಗಿ ಕೋಲಾರ ಮುರಳಿ, ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ರಾಮಾಂಜಿನಪ್ಪ, ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಆರ್‌ಪಿಐ) ಅಭ್ಯರ್ಥಿಯಾಗಿ ವೆಂಕಟೇಶಪ್ಪ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಬುಧವಾರ (ಮಾರ್ಚ್‌ 27) ಅಭ್ಯರ್ಥಿಗಳು ಹಾಗೂ ಸೂಚಕರ ಸಮ್ಮುಖದಲ್ಲಿ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮಾರ್ಚ್‌ 29 ಕಡೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.