ADVERTISEMENT

ಹಾಸನ: ಯುವ ಕಾಂಗ್ರೆಸ್‌ನಿಂದ ಮಂಥರ್‌ಗೌಡ ವಜಾ

ಕಾರ್ಯಾಧ್ಯಕ್ಷರನ್ನಾಗಿ ಸುಜನ್‌ಗೌಡ ನೇಮಕ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 12:52 IST
Last Updated 5 ಏಪ್ರಿಲ್ 2019, 12:52 IST
ಸುಜನ್‌ ಗೌಡ
ಸುಜನ್‌ ಗೌಡ   

ಹಾಸನ: ಬಿಜೆಪಿ ಅಭ್ಯರ್ಥಿ ಎ.ಮಂಜು ಅವರ ಪುತ್ರ ಡಾ.ಮಂಥರ್‌ಗೌಡ ಅವರನ್ನು ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.

ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿರುವ ಮಂಥರ್ ಗೌಡ ಅವರು ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸುತ್ತಿಲ್ಲ ಎಂಬ ಕಾರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷರನ್ನಾಗಿ ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಅವರ ಪುತ್ರ ಸುಜನ್‌ಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ಕೆ.ಕೆಂಪರಾಜ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಎ.ಮಂಜು ಪರ ಪ್ರಚಾರ ನಡೆಸಿದ್ದರಿಂದ ಮತ್ತು ಪಕ್ಷದ ಚಟುವಟಿಕೆಯಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಹಲವು ಬಾರಿ ಮಂಥರ್ ಗೌಡ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಇದಕ್ಕೆ ಅವರು ಉತ್ತರ ನೀಡಿರಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.