ಮುಂಬೈ: ಅಂತರರಾಷ್ಟ್ರೀಯ ಮಹಿಳಾ ದಿನದ ಶುಭಾಶಯ ಹೇಳಲು ಮಾಡಿದ್ದ ಟ್ವೀಟ್‌ನಿಂದಾಗಿ ತೀವ್ರ ವಿರೋಧ ಎದುರಿಸುತ್ತಿರುವ ಸಿನಿಮಾ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಅವರನ್ನು ಬಾಲಿವುಡ್ ನಟಿ ರಾಖಿ ಸಾವಂತ್ ಸಮರ್ಥಿಸಿಕೊಂಡಿದ್ದಾರೆ.
ವರ್ಮಾ, ‘ಜಗತ್ತಿನ ಎಲ್ಲ ಹೆಂಗಸರೂ ಸನ್ನಿ ಲಿಯೋನ್‌ಗಿಂತ ಹೆಚ್ಚು ಸುಖ ನೀಡಲಿ’ ಎಂದು ಮಹಿಳಾ ದಿನದಂದು ಟ್ವೀಟ್ ಮಾಡಿದ್ದರು. ಇದಕ್ಕೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮತ್ತು ವರ್ಮಾ ಟ್ವೀಟ್ ವಿರುದ್ಧ ಗೋವಾದಲ್ಲಿ ದೂರು ಸಹ ದಾಖಲಾಗಿತ್ತು. ಬಳಿಕ ತಮ್ಮ ತಪ್ಪಿನ ಅರಿವಾಗಿ ಕ್ಷಮೆಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.