ADVERTISEMENT

ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಸ್ಯಾಂಡಲ್‌ವುಡ್‌ ಜೋಡಿ ಚಿರಂಜೀವಿ ಸರ್ಜಾ – ಮೇಘನಾ ರಾಜ್

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2017, 16:51 IST
Last Updated 9 ಅಕ್ಟೋಬರ್ 2017, 16:51 IST
ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಸ್ಯಾಂಡಲ್‌ವುಡ್‌ ಜೋಡಿ ಚಿರಂಜೀವಿ ಸರ್ಜಾ – ಮೇಘನಾ ರಾಜ್
ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಸ್ಯಾಂಡಲ್‌ವುಡ್‌ ಜೋಡಿ ಚಿರಂಜೀವಿ ಸರ್ಜಾ – ಮೇಘನಾ ರಾಜ್   

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚಿರಂಜೀವಿ ಸರ್ಜಾ ಅವರು ನಟಿ ಮೇಘನಾ ರಾಜ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಅ. 22ರಂದು ಚಿರು ಮತ್ತು ಮೇಘನಾ ರಾಜ್‌ ಜೋಡಿಯ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಡಿ. 6ಕ್ಕೆ ಮದುವೆ ದಿನಾಂಕ ನಿಗದಿಪಡಿಸಲಾಗಿದೆ.

ಹಿರಿಯ ನಿರ್ಮಾಪಕ ದ್ವಾರಕೀಶ್ ನಿರ್ಮಾಣದ ‘ಆಟಗಾರ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಒಟ್ಟಿಗೆ ಅಭಿನಯಿಸಿದ್ದರು. ಬಹುಕಾಲ ಸ್ನೇಹಿತರಾಗಿದ್ದ ಈ ಜೋಡಿ ಇದೀಗ ಮದುವೆಯಾಗಲು ನಿರ್ಧರಿಸಿದ್ದಾರೆ.

ADVERTISEMENT

ಹಿರಿಯ ನಟ ಸುಂದರ್ ರಾಜ್ ಹಾಗೂ ನಟಿ ಪ್ರಮೀಳಾ ಜೋಷಾಯ್ ದಂಪತಿಯ ಏಕೈಕ ಪುತ್ರಿಯಾಗಿದ್ದಾರೆ ಮೇಘನಾ ರಾಜ್. ಚಿರಂಜೀವಿ ಸರ್ಜಾ ಹಿರಿಯ ನಟ ಅರ್ಜುನ್ ಸರ್ಜಾ ಅವರ ಸೋದರ ಅಳಿಯ(ಅಕ್ಕನ ಮಗ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.