ಬಹುತೇಕ ಹೊಸಬರಿಂದಲೇ ಕೂಡಿರುವ ‘4.30 - 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಪೂವೈ ಸುರೇಶ್ ಹಾಗೂ ಶಿವರಾಜ್ ನಿರ್ದೇಶನವಿದೆ. ಧರ್ಮಶ್ರೀ ಮಂಜುನಾಥ್ ಮತ್ತು ಡಿ.ಯೋಗರಾಜ್ ನಿರ್ಮಾಣವಿದೆ.
‘ಸಂಬಂಧಗಳ ಮೌಲ್ಯಗಳನ್ನು ತಿಳಿಸುವ ಕಥಾಹಂದರ ಹೊಂದಿರುವ ಚಿತ್ರ. 90ರ ದಶಕದಲ್ಲಿ ಮದುವೆ ಅಂದರೆ ಒಂದು ಸಂಭ್ರಮ. ಪ್ರತಿಯೊಬ್ಬರ ಮನೆಗೂ ಹೋಗಿ ಪತ್ರಿಕೆ ಕೊಟ್ಟು ಮದುವೆಗೆ ಕರೆಯುತ್ತಿದ್ದರು. ಈಗ ಹಾಗಲ್ಲ. ಎಲ್ಲಾ ಮೊಬೈಲ್‌ನಲ್ಲೇ. ಹಾಗಾಗಿ ಈಗಿನ ಜನತೆಗೆ ಅಂದಿನ ಸಂಬಂಧಗಳು ಹೇಗಿತ್ತು ಎಂದು ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡುತ್ತಿದ್ದೇವೆ. ಬೆಂಗಳೂರಿನಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯಲಿದೆ. ಹಾಡುಗಳ ಚಿತ್ರೀಕರಣ ಚಿಕ್ಕಮಗಳೂರು, ಮಂಗಳೂರು ಮುಂತಾದೆಡೆ ನಡೆಯಲಿದೆ’ ಎಂದರು ನಿರ್ದೇಶಕರು.
ಅನಿಲ್, ಧನ್ಯಾ, ರಮೇಶ್ ರೈ, ರೇಖಾದಾಸ್ ಮುಂತಾದವರು ಚಿತ್ರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.