ADVERTISEMENT

‘45’ ಸಿನಿಮಾ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಡಿಸೆಂಬರ್ 2025, 6:00 IST
Last Updated 16 ಡಿಸೆಂಬರ್ 2025, 6:00 IST
<div class="paragraphs"><p>ನಟ&nbsp;ಶಿವರಾಜ್‌ಕುಮಾರ್</p></div>

ನಟ ಶಿವರಾಜ್‌ಕುಮಾರ್

   

ಚಿತ್ರ: ಇನ್‌ಸ್ಟಾಗ್ರಾಂ

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾದ ಟ್ರೇಲರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ನಿನ್ನೆ (ಡಿಸೆಂಬರ್ 15) ಸಂಜೆ 6.45ಕ್ಕೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಏಕಕಾಲಕ್ಕೆ 7 ಜಿಲ್ಲೆಯಲ್ಲಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.

ADVERTISEMENT

ಈಗ ‘45’ ಸಿನಿಮಾದ ಟ್ರೇಲರ್‌ಗೆ ವೀಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.‌ ಅರ್ಜುನ್ ಜನ್ಯಾ ನಿರೀಕ್ಷೆಗೂ ಮೀರಿದ ಸಿನಿಮಾ ಕೊಟ್ಟಿದ್ದಾರೆ ಎಂಬ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಟ್ರೇಲರ್‌ನಲ್ಲಿ ಪ್ರಮುಖವಾಗಿ ಶಿವಣ್ಣ ಹುಡುಗಿಯ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾ ಮೇಲೆ ಮತ್ತಷ್ಟು ಕುತೂಹಲ ಹೆಚ್ಚಾಗಿದೆ. ಆನಂದ್‌ ಆಡಿಯೋಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದೆ.

ನಟ ಶಿವರಾಜ್‌ಕುಮಾರ್

ಅದರಲ್ಲಿ ಕನ್ನಡ ಟ್ರೇಲರ್‌ಗೆ 23 ಲಕ್ಷ ವೀಕ್ಷಣೆ ಪಡೆದುಕೊಂಡರೆ, ಹಿಂದಿಯಲ್ಲಿ 1 ಕೋಟಿ, ತೆಲುಗು ಭಾಷೆಯಲ್ಲಿ 6 ಲಕ್ಷಕ್ಕೂ ಅಧಿಕ, ಮಲಯಾಳಂ ಭಾಷೆಯಲ್ಲಿ 6 ಲಕ್ಷ, ತಮಿಳು ಭಾಷೆಯಲ್ಲಿ 5 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡು ಮುನ್ನುಗ್ಗುತ್ತಿದೆ.

ಇನ್ನು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘45‘ ಇದೇ ಡಿಸೆಂಬರ್ 25ರ ಕ್ರಿಸ್‌ಮಸ್ ದಿನದಂದು ಬಿಡುಗಡೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.