
ನಟ ಶಿವರಾಜ್ ಕುಮಾರ್, ನಿರ್ದೇಶಕ ಹೇಮಂತ್ ಎಂ.ರಾವ್
ಚಿತ್ರ: ಇನ್‌ಸ್ಟಾಗ್ರಾಮ್
‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ ಹೊಸ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಇದೀಗ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಚಿತ್ರೀಕರಣದ ಹಿಂದಿನ ಚಿತ್ರಗಳನ್ನು ನಿರ್ದೇಶಕ ಹೇಮಂತ್ ಎಂ.ರಾವ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಹೇಮಂತ್ ಎಂ.ರಾವ್ ನಿರ್ದೇಶನದಲ್ಲಿ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ಮೂಡಿ ಬರುತ್ತಿದೆ.
ಸಿನಿಮಾದಲ್ಲಿ ಶಿವಣ್ಣ ಹಾಗೂ ಡಾಲಿ ಧನಂಜಯ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ನಿರ್ದೇಶಕ ಚಿತ್ರೀಕರಣ ಹಿಂದಿನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಈ ಸಿನಿಮಾವನ್ನು ವೈಶಾಖ್ ಜೆ.ಗೌಡ ಅವರ ವೈಶಾಖ್ ಜೆ ಫಿಲ್ಮ್ಸ್ ನಿರ್ಮಿಸಿದೆ.
ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಚನೆ ಮಾಡಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.