ADVERTISEMENT

666 ಆಪರೇಷನ್ ಡ್ರೀಮ್ ಥಿಯೇಟರ್: ಡಾಲಿ-ಶಿವಣ್ಣ ಸಿನಿಮಾಗೆ ಪ್ರಿಯಾಂಕಾ ಮೋಹನ್ ನಾಯಕಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ನವೆಂಬರ್ 2025, 7:40 IST
Last Updated 20 ನವೆಂಬರ್ 2025, 7:40 IST
<div class="paragraphs"><p>ನಟಿ ಪ್ರಿಯಾಂಕಾ ಮೋಹನ್ </p></div>

ನಟಿ ಪ್ರಿಯಾಂಕಾ ಮೋಹನ್

   

ಚಿತ್ರ: ಎಕ್ಸ್ ಖಾತೆ

ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಹಾಗೂ ಡಾಲಿ ಧನಂಜಯ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕೆ ಪ್ರಿಯಾಂಕಾ ಮೋಹನ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ADVERTISEMENT

ನಟಿ ಪ್ರಿಯಾಂಕಾ ಮೋಹನ್ ಅವರ ಹುಟ್ಟುಹಬ್ಬದ ದಿನವೇ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಬಗ್ಗೆ ನಟ ಡಾಲಿ ಧನಂಜಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಒಂದ್ ಕಥೆ ಹೇಳ್ಲಾ’ ಸಿನಿಮಾ ಮೂಲಕ ನಟಿ ಪ್ರಿಯಾಂಕಾ ಮೋಹನ್‌ ಅವರು ಚಂದನವನಕ್ಕೆ ಪದಾರ್ಪಣೆ ಮಾಡಿದ್ದರು. ತಮಿಳು, ತೆಲುಗಿನಲ್ಲಿ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಈಗ ಮತ್ತೆ ಕನ್ನಡದತ್ತ ಮುಖ ಮಾಡಿದ್ದಾರೆ.

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾವು ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾದ ನಿರ್ದೇಶಕ ಹೇಮಂತ್ ಎಂ.ರಾವ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಈ ಚಿತ್ರವನ್ನು ವೈಶಾಖ್ ಜೆ.ಗೌಡ ಅವರ ವೈಶಾಖ್ ಜೆ ಫಿಲ್ಮ್ಸ್ ನಿರ್ಮಿಸಿದ್ದು, ಶಿವರಾಜ್‌ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲದಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಚನೆ ಮಾಡಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.