
ನಿರ್ದೇಶಕ ಕಿರಣ್ ರಾಜ್, ಅನಯಾ ವಸುಧಾ
ಚಿತ್ರ: ಇನ್‌ಸ್ಟಾಗ್ರಾಮ್
2022ರಲ್ಲಿ ತೆರೆಕಂಡು ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡಿದ್ದ '777 ಚಾರ್ಲಿ' ಸಿನಿಮಾದ ನಿರ್ದೇಶಕ ಕಿರಣ್ ರಾಜ್ ಅವರ ನಿವಾಸದಲ್ಲಿ ಸಂಭ್ರಮ ಮನೆಮಾಡಿದೆ.
ಅನಯಾ ವಸುಧಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ನಿರ್ದೇಶಕ ಕಿರಣ್ ರಾಜ್ ಈಗ ಅರಿಸಿನ ಶಾಸ್ತ್ರ ನೆರವೇರಿದೆ.
ಇದೇ ವರ್ಷದ ಜನವರಿಯಲ್ಲಿ ನಿರ್ದೇಶಕ ಕಿರಣ್ ರಾಜ್ ಹಾಗೂ ಅನಯಾ ವಸುಧಾ ಅವರ ನಿಶ್ಚಿತಾರ್ಥವು ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದಿತ್ತು.
ನಿಶ್ಚಿತಾರ್ಥ ಸಂಭ್ರಮದಲ್ಲಿ ಕುಟುಂಬಸ್ಥರು, ಸ್ನೇಹಿತರು ನಿರೂಪಕಿ ಅನುಶ್ರೀ ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದ್ದರು.
ಇದೀಗ ನಿರ್ದೇಶಕ ಕಿರಣ್ ರಾಜ್ ಹಾಗೂ ಅನಯಾ ವಸುಧಾ ಜೋಡಿ ಅರಿಸಿನ ಶಾಸ್ತ್ರದಲ್ಲಿ ಮಿಂದೆದ್ದಾರೆ. ಅರಶಿಣ ಶಾಸ್ತ್ರದ ವಿಡಿಯೊವನ್ನು ಕಿರಣ್ ರಾಜ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಕಿರಣ್ ರಾಜ್ ಹಾಗೂ ಅನಯ ವಸುಧಾ ಇಬ್ಬರು ಮಂಗಳೂರು ಗಡಿಭಾಗ ಕಾಸರಗೋಡು ಮೂಲದವರು. ಚಾರ್ಲಿ ಸಿನಿಮಾ ಯಶಸ್ವಿಯಾಗಿ ಕಿರಣ್ ಅವರಿಗೆ ಚಂದನವನದಲ್ಲಿ ಹೆಸರು ತಂದುಕೊಟ್ಟಿತ್ತು.
ಕಿರಣ್ ರಾಜ್ ಹಾಗೂ ಅನಯಾ ವಸುಧಾ ನವೆಂಬರ್ 30ರಂದು ಕಾಸರಗೋಡಿನ ನಾರಂಪಾಡಿ ದೇವಸ್ಥಾನದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.