ADVERTISEMENT

ಟ್ರೇಲರ್‌ನಲ್ಲಿ ಬಂದ ಶಿವಾಜಿ ಸುರತ್ಕಲ್‌ –2

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2023, 19:30 IST
Last Updated 2 ಏಪ್ರಿಲ್ 2023, 19:30 IST
ರಮೇಶ್‌ ಅರವಿಂದ್‌, ಮೇಘನಾ ಗಾಂವ್ಕರ್‌, ರಾಧಿಕಾ ನಾರಾಯಣ್‌, ಸಂಗೀತಾ ಶೃಂಗೇರಿ
ರಮೇಶ್‌ ಅರವಿಂದ್‌, ಮೇಘನಾ ಗಾಂವ್ಕರ್‌, ರಾಧಿಕಾ ನಾರಾಯಣ್‌, ಸಂಗೀತಾ ಶೃಂಗೇರಿ   

ರಮೇಶ್ ಅರವಿಂದ್ ನಾಯಕ ನಟನೆಯ ‘ಶಿವಾಜಿ ಸುರತ್ಕಲ್ 2’ ಟ್ರೇಲರ್‌ನಲ್ಲಿ ಮೂಡಿಬಂದಿದೆ. ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಆಕಾಶ್ ಶ್ರೀವತ್ಸ ನಿರ್ದೇಶಿಸಿರುವ ಈ ಚಿತ್ರವನ್ನು ರೇಖಾ ಕೆ.ಎನ್. ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ.

ಲಾಕ್‌ಡೌನ್‌ನಲ್ಲಿ ಹುಟ್ಟಿದ ಕಥೆ: ‘ಶಿವಾಜಿ ಸುರತ್ಕಲ್ 2’ ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ನಾನು ಹಾಗೂ ರಮೇಶ್ ಅರವಿಂದ್‌ ವಾಟ್ಸ್‌ಆ್ಯಪ್‌ ಮೂಲಕ ಎರಡನೇ ಭಾಗದ ಕಥೆಯನ್ನು ಚರ್ಚಿಸಿದೆವು. ಎಲ್ಲರಿಗೂ ಲಾಕ್‌ಡೌನ್‌ನಿಂದ ತೊಂದರೆ ಆಯಿತು. ಆದರೆ, ನಮಗೆ ಮಾತ್ರ ಈ ಚಿತ್ರದ ಕಥೆ ಬರೆಯಲು ಅನುಕೂಲವಾಯಿತು. ನಮ್ಮ‌ ತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಇದೇ ಏಪ್ರಿಲ್ 14ರಂದು ನಮ್ಮ ಶಿವಾಜಿ ಮತ್ತೆ ಹೊಸ ಕೇಸ್ ಹೊತ್ತು ಬರಲಿದ್ದಾನೆ. ಎಲ್ಲರಲ್ಲೂ ಮನೆ ಮಾಡಿರುವ ‘ಮಾಯಾವಿ’ ಯಾರು? ಎಂಬ ಪ್ರಶ್ನೆಗೆ ಅಂದೆ ಉತ್ತರ ಸಿಗಲಿದೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ತಿಳಿಸಿದರು.

ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ ಖುಷಿಯಿದೆ. ‘ಶಿವಾಜಿ ಸುರತ್ಕಲ್ - 2’ ಚಿತ್ರದ ಟ್ರೇಲರ್ ಚೆನ್ನಾಗಿದೆ. ನೀವು ಕುಟುಂಬ ಸಮೇತ ನಮ್ಮ ಚಿತ್ರ ನೋಡಲು ಚಿತ್ರಮಂದಿರಕ್ಕೆ ಬನ್ನಿ ಎಂದರು ನಟ ರಮೇಶ್ ಅರವಿಂದ್.

ADVERTISEMENT

ರಾಧಿಕಾ ಚೇತನ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ, ರಘು ರಮಣಕೊಪ್ಪ, ವಿನಾಯಕ ಜೋಶಿ, ವಿದ್ಯಾಮೂರ್ತಿ ತಾರಾಗಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.