ಚಿತ್ರದ ಪೋಸ್ಟರ್
ಚೆನ್ನೈ: ಅಮರನ್ ಸಿನಿಮಾ ಖ್ಯಾತಿಯ ನಟ ಶಿವ ಕಾರ್ತಿಕೇಯನ್ ಅವರು ಇಂದು (ಸೋಮವಾರ) 40ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ನಟನ ಹೊಸ ಚಿತ್ರ 'ಮದರಾಸಿ' ಅನ್ನು ಚಿತ್ರತಂಡ ಘೋಷಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿರ್ದೇಶಕ ಎ.ಆರ್.ಮುರುಗದಾಸ್ ಅವರು ಪೋಸ್ಟ್ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
'ಆತ್ಮೀಯ ಶಿವ ಕಾರ್ತಿಕೇಯನ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು, ಅತ್ಯುತ್ತಮ ಆ್ಯಕ್ಷನ್ ಚಿತ್ರಕ್ಕೆ ವೇದಿಕೆ ಸಿದ್ಧವಾಗಿದೆ' ಎಂದು ಮುರುಗದಾಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಚಿತ್ರದ ಫಸ್ಟ್ ಲುಕ್ ಟೀಸರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
2014ರಲ್ಲಿ ಮುರುಗದಾಸ್ ಮತ್ತು ಶಿವಕಾರ್ತಿಕೇಯನ್ ಅವರು ಜತೆಯಾಗಿ 'ಮಾನ್ ಕರಾಟೆ' ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.
ಇತ್ತೀಚೆಗೆ ಶಿವ ಕಾರ್ತಿಕೇಯನ್ ಅವರು 'ಅಮರನ್' ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮುರುಗದಾಸ್ ಪ್ರಸ್ತುತ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಚಿತ್ರ 'ಸಿಕಂದರ್' ನಲ್ಲಿ ಸದ್ಯ ಬ್ಯುಸಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.