ADVERTISEMENT

‘ಟೋಬಿ’ ಸಿನಿಮಾ ಚೆನ್ನಾಗಿಲ್ಲ ಎಂದ ಮಹಿಳೆಗೆ ಹಿಗ್ಗಾಮುಗ್ಗಾ ಬೈದ ಯುವಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಆಗಸ್ಟ್ 2023, 10:31 IST
Last Updated 26 ಆಗಸ್ಟ್ 2023, 10:31 IST
(ಚಿತ್ರ: youtube/publiconemedia)
(ಚಿತ್ರ: youtube/publiconemedia)   

ಬೆಂಗಳೂರು: ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಚಿತ್ರ ಶುಕ್ರವಾರ ರಾಜ್ಯದಾದ್ಯಂತ ಬಿಡುಗಡೆಗೊಂಡಿದ್ದು, ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

‘ಗರುಡ ಗಮನ ವೃಷಭ ವಾಹನ’ ಚಿತ್ರದ ಮೂಲಕ ಗಮನ ಸೆಳೆದಿದ್ದ ರಾಜ್‌ ಬಿ. ಶೆಟ್ಟಿ ಈ ಚಿತ್ರದಲ್ಲಿಯೂ ಅಂತಹದೇ ಒಂದು ಕಥಾ ಹಂದರವನ್ನು ಮತ್ತೆ ತೆರೆ ಮೇಲೆ ಮೂಡಿಸಿದ್ದಾರೆ.

ಚಿತ್ರ ಬಿಡುಗಡೆಯಾದ ಹಿನ್ನೆಲೆ ಯೂಟ್ಯೂಬ್‌ ಚಾನೆಲ್‌ವೊಂದು ಪೇಕ್ಷಕರ ಪ್ರತಿಕ್ರಿಯೆ ಕೇಳಿದ್ದು, ಮಹಿಳೆಯೊಬ್ಬರು ಚಿತ್ರ ಚೆನ್ನಾಗಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಮಹಿಳೆ ಚಿತ್ರಮಂದಿರದಿಂದ ಹೊರಬರುತ್ತಿದ್ದಂತೆ ಯುವಕನೊಬ್ಬ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ ಅಶ್ಲೀಲ ಶಬ್ದಗಳಿಂದ ಆಕೆಯನ್ನು ನಿಂದಿಸಿದ್ದಾನೆ. ‘ಚಿತ್ರ ಚೆನ್ನಾಗಿರಲಿಲ್ಲ ಅದಕ್ಕೆ ಚೆನ್ನಾಗಿಲ್ಲ ಎಂದೆ’ ಎಂದು ಮಹಿಳೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಓದಿ: TOBY ಸಿನಿಮಾ ವಿಮರ್ಶೆ: ಚಿಮ್ಮಿದ ರಕ್ತದಲ್ಲಿ ಕಾಣದಂತಾಗುವ ಕಣ್ಣೀರು

ಇಷ್ಟಕ್ಕೆ ಬಿಡದ ಯುವಕ, ‘ಕನ್ನಡ ಚಿತ್ರ ಚೆನ್ನಾಗಿಲ್ಲ ಎಂದು ಹೇಳ್ತಿಯಾ?’ ಎಂದು ಮತ್ತೆ ತರಾಟೆಗೆ ತೆಗೆದುಕೊಂಡಿದ್ದಾನೆ.

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಯುವಕ ವರ್ತನೆ ವಿರುದ್ಧ ನೆಟ್ಟಿಗರು ಕಿಡಿಕಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.