ಗಾಯಕಿ ಕಲ್ಪನಾ
Facebook/Kalpana Raghavendar
ಹೈದರಾಬಾದ್: ತಾನು ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಖ್ಯಾತ ಗಾಯಕಿ ಕಲ್ಪನಾ ರಾಘವೇಂದ್ರರ್ ಬುಧವಾರ ತಿಳಿಸಿದ್ದಾರೆ.
ನಿದ್ರೆ ಮಾತ್ರೆಗಳನ್ನು ಸೇವಿಸಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಗಾಯಕಿಯನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಗಾಯಕಿ ಈ ಸಂಬಂಧ ಪ್ರತಿಕ್ರಿಯಿಸಿದ್ದಾರೆ.
‘ನಿದ್ರೆ ಸರಿಯಾಗಿ ಬರದ ಕಾರಣ ನಿದ್ರೆ ಮಾತ್ರೆಗಳನ್ನು ತೆಗೆದುಕೊಂಡೆ. ಆದರೆ ಆಕಸ್ಮಿಕವಾಗಿ ಅತಿಯಾದ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರಿಂದ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದೆ. ನಾನು ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ ಎಂದು ಕಲ್ಪನಾ ಸ್ಪಷ್ಟನೆ ನೀಡಿದ್ದಾರೆ.
ಎರ್ನಾಕುಲಂನಿಂದ ಹೈದರಾಬಾದ್‌ಗೆ ಪ್ರಯಾಣಿಸಿದ್ದ ಅವರು, ನಿದ್ರೆ ಬರದೇ ನಿದ್ರೆ ಮಾತ್ರೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಂಡಿದ್ದರು. ಹೀಗಾಗಿ ಅವರು ಪ್ರಜ್ಞಾಹೀನಾ ಸ್ಥಿತಿಗೆ ತಲುಪಿದ್ದರು. ಕಲ್ಪನಾ ಅವರು ಪತಿಯ ದೂರವಾಣಿ ಸಂಪರ್ಕಕ್ಕೆ ಸಿಗಲಿಲ್ಲ. ಬಳಿಕ ಕಾಲೋನಿ ವೆಲ್ಫೇರ್ ಅಸೋಸಿಯೇಷನ್ ಸದಸ್ಯರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಈ ಬಗ್ಗೆ ಕಲ್ಪನಾ ಮಗಳು ಪ್ರತಿಕ್ರಿಯಿಸಿದ್ದು, ನನ್ನ ತಾಯಿ ಆತ್ಮಹತ್ಯೆಗೆ ಪ್ರಯತ್ನಿಸಿಲ್ಲ. ಆಕೆ, ವೈದ್ಯರು ಶಿಫಾರಸು ಮಾಡಿದ ಪ್ರಮಾಣಕ್ಕಿಂತ ಅಧಿಕ ಪ್ರಮಾಣದಲ್ಲಿ ಮಾತ್ರೆಗಳನ್ನು ಸೇವಿಸಿದ್ದರಿಂದ ಈ ಘಟನೆ ನಡೆದಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.