
ಅಭಿಷೇಕ್ ಅಂಬರೀಶ್, ಅವಿವಾ ಬಿದ್ದಪ್ಪ ಹಾಗೂ ಪುತ್ರ ರಾಣಾ
ಚಿತ್ರ: ಇನ್‌ಸ್ಟಾಗ್ರಾಮ್
ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಹಾಗೂ ಪತ್ನಿ ಅವಿವಾ ಬಿದ್ದಪ್ಪ ಅವರ ಪುತ್ರ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾನೆ.
ಮಗ ರಾಣಾ ಅಮರ್ ಅಂಬರೀಶ್ ಮೊದಲ ವರ್ಷದ ಹುಟ್ಟುಹಬ್ಬವನ್ನು ಅಭಿಷೇಕ್ ಅಂಬರೀಶ್ ದಂಪತಿ ಅದ್ಧೂರಿಯಾಗಿ ಆಚರಿಸಿದ್ದಾರೆ.
ಅಭಿಷೇಕ್ ಅಂಬರೀಶ್ ಹಾಗೂ ಪತ್ನಿ ಅವಿವಾ ಬಿದ್ದಪ್ಪ ಅವರು 2023ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ವರ್ಷ 2024ರ ನವೆಂಬರ್ 12ರಂದು ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ದಂಪತಿಗೆ ಗಂಡು ಮಗು ಜನಿಸಿತ್ತು.
ಇದೀಗ ತಮ್ಮ ಮುದ್ದಾದ ಮಗ ರಾಣಾ ಅಮರ್ ಅಂಬರೀಶ್ ಮೊದಲ ವರ್ಷದ ಹುಟ್ಟುಹಬ್ಬವನ್ನ ಅಭಿಷೇಕ್ ಹಾಗೂ ಅವಿವಾ ಕಾಡಿನ ರೀತಿಯಲ್ಲಿ ವಿನ್ಯಾಸದಲ್ಲಿ ಆಚರಣೆ ಮಾಡಿದ್ದಾರೆ.
ಕಾಡಿನ ರೀತಿಯಲ್ಲಿ ವಿನ್ಯಾಸದಲ್ಲಿ ನಡೆದ ರಾಣಾ ಅಮರ್ ಅಂಬರೀಶ್ ಹುಟ್ಟುಹಬ್ಬಕ್ಕೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಿದ್ದಾರೆ.
ನಟಿ ಮೇಘನಾ ರಾಜ್, ಪ್ರಣೀತಾ ಸುಭಾಷ್ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದರು.
ಜೊತೆಗೆ ಅವಿವಾ ಅವರ ತಂದೆ-ತಾಯಿ ಮತ್ತು ನಟಿ ಸುಮಲತಾ ಅಂಬರೀಶ್ ಕೂಡ ಮೊಮ್ಮಗನ ಹುಟ್ಟುಹಬ್ಬದಲ್ಲಿ ಕಾಣಿಸಿಕೊಂಡರು. ಮಗನ ಹುಟ್ಟು ಹಬ್ಬದ ಚಿತ್ರಗಳನ್ನು ಅವಿವಾ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.