ADVERTISEMENT

ಡ್ರಗ್ಸ್‌ ಪ್ರಕರಣ: ಎನ್‌ಸಿಬಿಯಿಂದ ನಟಿ ಅನನ್ಯಾ ಪಾಂಡೆ ಮೊಬೈಲ್, ಲ್ಯಾಪ್‌ಟಾಪ್‌ ವಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಅಕ್ಟೋಬರ್ 2021, 12:39 IST
Last Updated 21 ಅಕ್ಟೋಬರ್ 2021, 12:39 IST
ಮುಂಬೈನ ಎನ್‌ಸಿಬಿ ಕಚೇರಿಗೆ ಆಗಮಿಸಿದ ಬಾಲಿವುಡ್‌ ನಟಿ ಅನನ್ಯಾ ಪಾಂಡೆ
ಮುಂಬೈನ ಎನ್‌ಸಿಬಿ ಕಚೇರಿಗೆ ಆಗಮಿಸಿದ ಬಾಲಿವುಡ್‌ ನಟಿ ಅನನ್ಯಾ ಪಾಂಡೆ   

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ ಎನ್‌ಸಿಬಿ ಗುರುವಾರ ದಾಳಿ ನಡೆಸಿದೆ.

ಈ ಸಂದರ್ಭದಲ್ಲಿ ಅನನ್ಯಾ ಪಾಂಡೆಗೆ ಸೇರಿವೆ ಎನ್ನಲಾದ ಮೊಬೈಲ್‌ ಮತ್ತು ಲ್ಯಾಪ್‌ಟಾಪ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದೇ ವೇಳೆ ಮುಂಬೈನ ಎನ್‌ಸಿಬಿ ಕಚೇರಿಯಲ್ಲಿ ಅನನ್ಯಾ ಪಾಂಡೆ ಅವರ ವಿಚಾರಣೆ ನಡೆಸಲಾಗಿದೆ.

ಅಕ್ಟೋಬರ್ 3 ರಂದು ಮುಂಬೈನ ಕರಾವಳಿಯಲ್ಲಿ ಐಷಾರಾಮಿ ಕ್ರೂಸ್ ಹಡಗಿನ ಮೇಲೆ ಎನ್‌ಸಿಬಿ ದಾಳಿ ನಡೆಸಿತ್ತು. ಆ ವೇಳೆ ಬಾಲಿವುಡ್‌ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್‌ರನ್ನು ಬಂಧಿಸಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಪಾಂಡೆ ಹೆಸರು ಕೇಳಿಬಂದಿದೆ.

ADVERTISEMENT

22 ವರ್ಷದ ಅನನ್ಯಾ ಮತ್ತು ಆರ್ಯನ್ ಉತ್ತಮ ಸ್ನೇಹಿತರು. ಆರ್ಯನ್‌ ಜೊತೆಗಿನ ಚಾಟ್‌ ಆಧಾರದಲ್ಲಿ ಅನನ್ಯಾರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆರ್ಯನ್‌ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.