ADVERTISEMENT

ಶಿವಣ್ಣ ‘ಘೋಸ್ಟ್‌‘ ಚಿತ್ರದಲ್ಲಿ ಅನುಪಮ್‌ ಖೇರ್‌

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 12:58 IST
Last Updated 28 ಮಾರ್ಚ್ 2023, 12:58 IST
   

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಘೋಸ್ಟ್‌‘ನಲ್ಲಿ ಬಾಲಿವುಡ್‌ ನಟ ಅನುಪಮ್‌ ಖೇರ್‌ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸುಮಾರು 4 ದಶಕ ಪೂರೈಸಿರುವ ಖೇರ್‌, ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಶಿವಣ್ಣ, ತಮಿಳು ನಟ ಜಯರಾಂ ಜತೆಗೆ ಅನುಪಮ್‌ ಖೇರ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಪಾಲ್ಗೊಂಡರು. ಮಾಧ್ಯಮಗಳ ಜತೆ ಅನುಭವ ಹಂಚಿಕೊಂಡ ಖೇರ್‌, ಶಿವಣ್ಣರಂತಹ ಹಿರಿಯ ನಟರೊಂದಿಗೆ ಅಭಿನಯಿಸುವುದು ಹೆಮ್ಮೆಯ ಸಂಗತಿ. ಒಂದು ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಮೊದಲ ಸಲ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದು ಖುಷಿ ನೀಡಿದೆ ಎಂದರು.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಶ್ರೀನಿ ಚಿತ್ರದ ನಿರ್ದೇಶಕರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನ ಹೊರವಲಯದಲ್ಲಿ ಅದ್ದೂರಿ ಸೆಟ್‌ಗಳನ್ನು ಹಾಕಲಾಗಿದೆ. ಚಿತ್ರದ ಬಹುಭಾಗ ಚಿತ್ರೀಕರಣ ಬೆಂಗಳೂರು ಹಾಗೂ ಮೈಸೂರಿನಲ್ಲಿ ಪೂರ್ಣಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.