ಬೆಂಗಳೂರು: ‘ಬ್ರಾಹ್ಮಣ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಚೇತನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಅವರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಸೋಮವಾರ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿರುವ ಕಮಿಷನರ್, ಕ್ರಮದ ಭರವಸೆ ನೀಡಿದ್ದಾರೆ.
‘ಚೇತನ್ ಅವರ ಹೇಳಿಕೆ ಬ್ರಾಹ್ಮಣ ಸಮುದಾಯದವರಿಗೆ ಬೇಸರ ಉಂಟು ಮಾಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯದ ವಿವಿಧ ಬ್ರಾಹ್ಮಣ ಸಂಘ ಸಂಸ್ಥೆಗಳು ನನಗೆ ಮನವಿ ಮಾಡಿವೆ. ಹೀಗಾಗಿ, ಚೇತನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇನೆ’ ಎಂದು ಸಚ್ಚಿದಾನಂದ ಮೂರ್ತಿ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.