ADVERTISEMENT

ನಟ ದರ್ಶನ್‌ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2026, 6:41 IST
Last Updated 16 ಫೆಬ್ರುವರಿ 2026, 6:41 IST
   

ನಟ ದರ್ಶನ್ ತೂಗುದೀಪ  ಅವರಿಗೆ ಇಂದು (ಸೋಮವಾರ) 49ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆ ಪತ್ನಿ ವಿಜಯಲಕ್ಷ್ಮೀ ಸೇರಿ ಚಂದನವನದ ಅನೇಕ ಸಿನಿ ತಾರೆಯರು ಶುಭಕೋರಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರು ಸದ್ಯ ಜೈಲಿನಲ್ಲಿದ್ದಾರೆ.

ದರ್ಶನ್ ಅವರ ಹುಟ್ಟುಹಬ್ಬಕ್ಕೆ ಚಂದನವನದ ತಾರೆಯರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡು ಶುಭಾಶಯ ತಿಳಿಸಿದ್ದಾರೆ.

ADVERTISEMENT

ದರ್ಶನ್ ಅವರ ಕಳೆದ ವರ್ಷದ ಹುಟ್ಟುಹಬ್ಬ ಆಚರಣೆಯ ಫೋಟೊ ಶೇರ್ ಮಾಡಿದ ಪತ್ನಿ ವಿಜಯಲಕ್ಷ್ಮೀ ಅವರು, ‘ಪ್ರತಿದಿನವೂ ಸಂಭ್ರಮಿಸಲ್ಪಡುವ ವ್ಯಕ್ತಿಗೆ, ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ಪುತ್ರ ವಿನೀಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ದರ್ಶನ್ ಅವರ ಜೊತೆಗಿನ ವಿಡಿಯೊ ಶೇರ್ ಮಾಡಿ ‘ನನಗೆ ಬೆಂಬಲ ನೀಡುವ, ಸ್ನೇಹಿತ, ಅಣ್ಣ, ನನ್ನ ಪ್ರೀತಿಯ ಅಪ್ಪನಿಗೆ ಹುಟ್ಟುಹಬ್ದದ ಶುಭಾಶಯಗಳು. ಯಾವ ಪರಿಸ್ಥಿತಿಯಲ್ಲಿ ಇದ್ದರೂ ಕೂಡ ನಾನು ಯಾವಾಗಲೂ ನಿಮ್ಮ ಜೊತೆ ಇರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ನಟ ಚಿಕ್ಕಣ್ಣ ಅವರು ದರ್ಶನ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

ಬಿಗ್‌ಬಾಸ್ ಮಾಜಿ ಸ್ಪರ್ಧಿ, ನಟಿ ಅನುಷಾ ರೈ ಅವರು ದರ್ಶನ್ ಅವರ ಫೋಟೊ ಶೇರ್ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ನಟ ಧನ್ವೀರ್ ಅವರು ದರ್ಶನ್ ಜೊತೆಗಿನ ವಿಡಿಯೊ ಶೇರ್ ಮಾಡಿಕೊಂಡು ‘ಉಸಿರಿರುವವರೆಗೂ ನಿಮ್ಮಿಂದೆ ಇರ್ತಿವಿ’ ಎಂದು ಬರೆದು ಶುಭಾಶಯ ತಿಳಿಸಿದ್ದಾರೆ.

ನಟ, ನಿರ್ದೇಶಕ ತುರುಣ್ ಸುಧೀರ್ ಹಾಗೂ ನಟಿ ರಕ್ಷಿತಾ ಅವರು ಸಾಮಾಜಿಕ ಮಾಧ್ಯಮದಲ್ಲಿ ದರ್ಶನ್ ಜೊತೆಗಿನ ಫೋಟೊ ಹಂಚಿಕೊಂಡು ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.

ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ರಾಜ್ಯದಾದ್ಯಂತ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅನ್ನ ಸಂತರ್ಪಣೆ, ರಕ್ತದಾನ, ಬಡವರಿಗೆ ನೆರವಾಗಿ ದರ್ಶನ್‌ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.