
ನಟ ದರ್ಶನ್
ಚಿತ್ರ: ಇನ್‌ಸ್ಟಾಗ್ರಾಂ
ಕನ್ನಡ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಫೆಬ್ರುವರಿ 16ರಂದು ನಟ ದರ್ಶನ್ ಅವರ ಹುಟ್ಟುಹಬ್ಬ. ಹೀಗಾಗಿ ಅಭಿಮಾನಿಗಳು ಆಯಾ ಊರಿನಲ್ಲಿ ಅನಾಥಾಶ್ರಮಗಳಲ್ಲಿ ಊಟ ವಿತರಣೆ, ವಿದ್ಯಾರ್ಥಿಗಳಿಗೆ ಬಟ್ಟೆ–ಪುಸ್ತಕ, ರಕ್ತದಾನ ಶಿಬಿರಗಳು ಹಾಗೂ ವೃದ್ಧಾಶ್ರಮಗಳಲ್ಲಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.
ರಾಜ್ಯದಾದ್ಯಂತ ನಟ ದರ್ಶನ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ತಮ್ಮ ಅಭಿಮಾನಿಗಳನ್ನು ಪ್ರೀತಿಯಿಂದ ನಟ ದರ್ಶನ್ ಅವರು ‘ಸೆಲೆಬ್ರಿಟಿಸ್’ ಎಂದೇ ಕರೆಯುತ್ತಾರೆ. ಇದಕ್ಕೆ ಸಾಕ್ಷಿ ಎಂಬಂತೆ ತಮ್ಮ ಎದೆಯ ಮೇಲೆ ಸೆಲೆಬ್ರಿಟಿಸ್ ಎಂದು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳೆ ನಿಜವಾದ ಆಸ್ತಿ ಎಂದು ಗೌರವಿಸುತ್ತಾರೆ.
ಆದರೆ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಈ ಬಾರಿಯ ಹುಟ್ಟುಹಬ್ಬವನ್ನು ಸಾಮಾಜ ಸೇವೆ ಮಾಡುವ ಮೂಲಕ, ಬಡವರಿಗೆ ದಾನ, ಧರ್ಮ ಮಾಡುವುದಕ್ಕೆ ಮುಂದಾಗಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಪೋಸ್ಟ್ ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ಸಂದೇಶ ಕೊಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.