ADVERTISEMENT

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆಗೆ ಹಾಜರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2022, 6:55 IST
Last Updated 14 ಸೆಪ್ಟೆಂಬರ್ 2022, 6:55 IST
ನಟಿ ಜಾಕ್ವೆಲಿನ್ ಫರ್ನಾಂಡಿಸ್
ನಟಿ ಜಾಕ್ವೆಲಿನ್ ಫರ್ನಾಂಡಿಸ್   

ನವದೆಹಲಿ: ₹200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜಾಕ್ವೆಲಿನ್ಫರ್ನಾಂಡಿಸ್ ಅವರು ಬುಧವಾರ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಜಾಕ್ವೆಲಿನ್ ಅವರು ದೆಹಲಿಯ ಆರ್ಥಿಕ ಅಪರಾಧ ವಿಭಾಗದ ಕಚೇರಿಗೆ ಬೆಳಿಗ್ಗೆ 11.30ರ ಸುಮಾರಿಗೆ ಆಗಮಿಸಿದರು ಎಂದು ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ಮತ್ತು ಹಲವರಿಗೆ ವಂಚಿಸಿದ್ದ ಆರೋಪದಡಿ ಪ್ರಕರಣ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಈಗಾಗಲೇ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ADVERTISEMENT

ಸುಕೇಶ್ ಅವರೊಂದಿಗಿನ ಸಂಬಂಧ ಮತ್ತು ಅವರಿಂದ ಪಡೆದ ಉಡುಗೊರೆಗಳ ಕುರಿತು ಜಾಕ್ವೆಲಿನ್‌ಗೆ ಪ್ರಶ್ನೆಗಳನ್ನು ಕೇಳುವುದಕ್ಕೆಸಿದ್ಧತೆ ಮಾಡಿಕೊಂಡಿರುವುದಾಗಿಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ಉದ್ಯಮಿ ಶಿವಿಂದರ್‌ ಮೋಹನ್‌ ಸಿಂಗ್‌ ಎಂಬುವರ ಪತ್ನಿ ಅದಿತಿ ಸಿಂಗ್‌ಗೆ ಕರೆ ಮಾಡಿ ತಾನು ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಪಕ್ಷಕ್ಕೆ ದೇಣಿಗೆ ನೀಡುವಂತೆ ಹೇಳಿ ಅವರಿಂದ ₹200 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ. ಈ ಪೈಕಿ ₹10 ಕೋಟಿ ಮೌಲ್ಯದ ಉಡುಗೊರೆಗಳನ್ನು ಜಾಕ್ವೆಲಿನ್‌ಗೆ ನೀಡಿದ್ದ. ಉಡುಗೊರೆ ಪಡೆದಿರುವುದನ್ನು ಜಾಕ್ವೆಲಿನ್‌ ಒಪ್ಪಿಕೊಂಡಿದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.