ADVERTISEMENT

ನಟ ಜಗ್ಗೇಶ್‌ಗೆ ಶ್ರೀಕೃಷ್ಣದೇವರಾಯ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2025, 22:27 IST
Last Updated 3 ಏಪ್ರಿಲ್ 2025, 22:27 IST
ನಟ ಜಗ್ಗೇಶ್‌
ನಟ ಜಗ್ಗೇಶ್‌    

ಬೆಂಗಳೂರು: ತೆಲುಗು ವಿಜ್ಞಾನ ಸಮಿತಿ ನೀಡುವ ಶ್ರೀಕೃಷ್ಣ ದೇವರಾಯ ಪುರಸ್ಕಾರಕ್ಕೆ ನಟ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್‌ ಅವರನ್ನು ಆಯ್ಕೆ ಮಾಡಲಾಗಿದೆ. ನಟ ಸಾಯಿ ಕುಮಾರ್‌ ಅವರಿಗೆ ಸುವರ್ಣ ಸತ್ಕಾರ ನೀಡಲಿದೆ.

ಏಪ್ರಿಲ್‌ 6ರಂದು ಬೆಳಿಗ್ಗೆ 10ಕ್ಕೆ ಮಲ್ಲೇಶ್ವರದ ವೈಯಾಲಿಕಾವಲ್‌ನಲ್ಲಿರುವ ಶ್ರೀಕೃಷ್ಣ ದೇವರಾಯ ಕಲಾಮಂದಿರ ದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಲಾಗುವುದು. ಪ್ರಶಸ್ತಿಯು ₹ 25 ಸಾವಿರ ನಗದು ಹೊಂದಿದೆ. ಸಮಾರಂಭದಲ್ಲಿ ಆಂಧ್ರ ಪ್ರದೇಶದ ವಿಧಾನಸಭೆಯ ಉಪಾಧ್ಯಕ್ಷ ಕೆ. ರಘುರಾಮ ಕೃಷ್ಣರಾಜು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌. ತಂಗಡಗಿ, ತೆಲುಗು ವಿಜ್ಞಾನ ಸಮಿತಿ ಅಧ್ಯಕ್ಷ ಎ. ರಾಧಾಕೃಷ್ಣರಾಜು, ತೆಲುಗು ವಿಜ್ಞಾನ ಸಮಿತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಶ್ಯಾಮರಾಜು ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಐ. ಲಕ್ಷ್ಮೀ ರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT