ಕೆಲ ದಿನಗಳ ಹಿಂದೆ ಭಾರತ ಪ್ರವಾಸದಲ್ಲಿದ್ದ ಅರ್ಜೆಂಟೀನಾದ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರು, ಮುಂಬೈನ ವಾಂಖೆಡೆ ಮೈದಾನಕ್ಕೆ ಭೇಟಿ ನೀಡಿದ್ದರು. ಆ ವೇಳೆ ಅಲ್ಲಿ ನೆರೆದಿದ್ದ ಅಭಿಮಾನಿಗಳು 'ಮೆಸ್ಸಿ ..ಮೆಸ್ಸಿ' ಎಂದು ಕೂಗುತ್ತಿದ್ದರು. ಆ ಸಂದರ್ಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ‘ಗಣಪತಿ ಬಪ್ಪಾ ಮೋರಯಾ’ ಎಂದು ಘೋಷಣೆ ಕೂಗುವ ಮೂಲಕ ಅಲ್ಲಿನ ಜನರ ಗಮನ ಸೆಳೆಯಲು ಮುಂದಾರು. ಈ ಘಟನೆಗೆ ಸಂಬಂಧಿಸಿದಂತೆ ನಟ ಕಿಶೋರ್ ಸಾಮಾಜಿಕ ಮಾಧ್ಯಮದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತಾನಾಡಿರುವ ನಟ ಕಿಶೋರ್ ಅವರು, ‘ದೇವರ ಹೆಸರಲ್ಲಿ ಮೂರ್ಖರಾಗಿಸುವ, ಮೂರ್ಖರಾಗುವ ಮತ್ತು ಬಾಯಿ ಮುಚ್ಚಿಸುವ, ಬಾಯಿ ಮುಚ್ಚಿಕೊಳ್ಳುವ ರಾಜಕೀಯದ ಸೂಪರ್ ನಿದರ್ಶನ. ಒಬ್ಬ ಮುಖ್ಯಮಂತ್ರಿಯ ವಿರುದ್ಧವೇ ತಿರುಗಿ ಬೀಳುವ ಧೈರ್ಯ ಮಾಡಿದ ಜನರ ದನಿ ಬಿಜೆಪಿ ಟ್ರೇಡ್ ಮಾರ್ಕ್. ಡೈವರ್ಟ್ ಪಾಲಿಟಿಕ್ಸ್ ಗೆ ಬಲಿಯಾಗಿ ಕ್ಷಣದಲ್ಲಿ ಸದ್ದಡಗಿದ್ದು ನಮ್ಮ ದೇಶದ ಇಂದಿನ ಮುಂದಿನ ದುರಂತಕ್ಕೆ ಹಿಡಿದ ಕನ್ನಡಿ.. ಇನ್ನೂ ಸಾಕ್ಷಿ ಬೇಕಿದ್ದರೆ ಕಳೆದ ದಶಕದ ದೇಶದ ವಿದ್ಯಮಾನಗಳನ್ನು ಗಮನಿಸಿ ಪ್ಲೀಸ್‘ ಎಂದು ಬರೆದುಕೊಂಡು ನಟ ಕಿಶೋರ್ ಕಿಡಿಕಾರಿದ್ದಾರೆ.
ಲಿಯೋನೆಲ್ ಮೆಸ್ಸಿ ಅವರು ಪ್ರವಾಸದ ಮೊದಲ ದಿನ ಕೋಲ್ಕತ್ತ ಸಾಲ್ಟ್ ಲೇಕ್ ಮೈದಾನಕ್ಕೆ ಭೇಟಿ ನೀಡಿದ ಅವರು, ನಿಗದಿತ ಸಮಯಕ್ಕಿಂತ ಮುನ್ನವೇ ನಿರ್ಗಮಿಸಿದ್ದರು. ಆ ಬಳಿಕ ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳು ಬಾಟಲ್ ಹಾಗೂ ಕುರ್ಚಿಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.
ಅನಂತ್ ಅಂಬಾನಿ ಒಡೆತನದ ಗುಜರಾತ್‌ನ ಜಾಮ್ ನಗರದಲ್ಲಿರುವ ವನತಾರಗೆ ಫುಟ್‌ಬಾಲ್ ದಿಗ್ಗಜ ಮೆಸ್ಸಿ ಅವರು ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.