ಮಂಡ್ಯ: ನಟ ನೀನಾಸಂ ಸತೀಶ್ ತಾಯಿ, ಮದ್ದೂರು ತಾಲ್ಲೂಕು ಯಾಲದಹಳ್ಳಿ ಗ್ರಾಮದ ನಿವಾಸಿ ಚಿಕ್ಕತಾಯಮ್ಮ (76) ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬೆಂಗಳೂರಿನ ಸತೀಶ್ ನಿವಾಸದಲ್ಲಿ ಶುಕ್ರವಾರ ನಿಧನರಾದರು.
ಅವರಿಗೆ ಸತೀಶ್ ಸೇರಿ ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.
ಯಾಲದಹಳ್ಳಿ ಗ್ರಾಮದ ಅವರ ಜಮೀನಿನಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.