ADVERTISEMENT

ಸಚಿನ್ ವಾಲಿ ಜೊತೆ ಕೈಜೋಡಿಸಿದ ನಟ ನಿರೂಪ್‌ ಭಂಡಾರಿ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2023, 23:30 IST
Last Updated 14 ಡಿಸೆಂಬರ್ 2023, 23:30 IST
<div class="paragraphs"><p>ನಿರೂಪ್‌ ಭಂಡಾರಿ </p></div>

ನಿರೂಪ್‌ ಭಂಡಾರಿ

   

‘ರಂಗಿತರಂಗ’ ಸಿನಿಮಾ ಮೂಲಕ ಚಂದನವನದಲ್ಲಿ ಸದ್ದು ಮಾಡಿದ ನಟ ನಿರೂಪ್ ಭಂಡಾರಿ ಅವರ ಹೊಸ ಪ್ರಾಜೆಕ್ಟ್‌ ಘೋಷಣೆಯಾಗಿದೆ. 

‘ರಾಜರಥ’, ‘ವಿಕ್ರಾಂತ್ ರೋಣ’, ‘ಆದಿ ಲಕ್ಷ್ಮಿ ಪುರಾಣ’ ಮತ್ತು ‘ವಿಂಡೋ ಸೀಟ್‌’ ಚಿತ್ರಗಳ ಬಳಿಕ ನಿರೂಪ್‌, ಸಚಿನ್ ವಾಲಿ ಎಂಬುವವರ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಚಿನ್‌ಗೆ ಇದು ಚೊಚ್ಚಲ ಸಿನಿಮಾ. ಕೆಲವೊಂದಷ್ಟು ಸಿನಿಮಾಗಳಲ್ಲಿ ಸಹಾಯಕ ಹಾಗೂ ಸಹ ನಿರ್ದೇಶಕನಾಗಿ ಸಚಿನ್‌ ಕಾರ್ಯನಿರ್ವಹಿಸಿದ್ದಾರೆ.

ADVERTISEMENT

‘ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರದ ಸಿನಿಮಾ ಇದಾಗಿದೆ ಎಂದಿದ್ದಾರೆ’ ಸಚಿನ್‌.

ಸ್ಕ್ರಿಪ್ಟ್ ಪೂಜೆ ಮುಗಿಸಿಕೊಂಡಿರುವ ಈ ಸಿನಿಮಾಗೆ ಅಂಕಿತ್ ಸಿನಿಮಾಸ್‌ ಅಡಿಯಲ್ಲಿ ಅಂಕಿತ್ ಸೋನಿಗಾರ ಹಣ ಹೂಡಿದ್ದಾರೆ. ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ. 

ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಚಿತ್ರಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಜನವರಿಯಿಂದ ಚಿತ್ರೀಕರಣಕ್ಕೆ ಹೊರಡಲು ಸಜ್ಜಾಗಿರುವ ಚಿತ್ರತಂಡ, ಬೆಂಗಳೂರು, ಶಿವಮೊಗ್ಗ, ತೀರ್ಥಹಳ್ಳಿ, ತುಮಕೂರು ಹಾಗೂ ಮೈಸೂರು ಸುತ್ತಮುತ್ತ ಶೂಟಿಂಗ್‌ ನಡೆಸಲು ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.