
ಪ್ರಭಾಸ್
ರಾಜಾ ಸಾಬ್ ಸಿನಿಮಾ ಬಳಿಕ ಡಾರ್ಲಿಂಗ್ ಪ್ರಭಾಸ್ ಅವರು ‘ಫೌಜಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ಸಿನಿಮಾದ ಚಿತ್ರೀಕರಣದ ವೇಳೆ ನಟ ಪ್ರಭಾಸ್‌ಗೆ ಗಾಯಗಳಾಗಿವೆ ಎಂದು ವರದಿಯಾಗಿವೆ.. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಿಗೆ ಆತಂಕಕ್ಕೆ ಒಳಗಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ನಟನ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ.
ಫೌಜಿ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟ ಪ್ರಭಾಸ್ ಅವರು ಕುದುರೆ ಸವಾರಿ ಮಾಡುವಾಗ ಗಾಯಗೊಂಡಿದ್ದಾರಂತೆ. ಈ ಸುದ್ದಿ ಹರಿದಾಡುತ್ತಿದ್ದಂತೆ ಚಿತ್ರತಂಡ, ಪ್ರಭಾಸ್ ಅವರಿಗೆ ಹೆಚ್ಚಿನ ಗಾಯಗಳು ಆಗಿಲ್ಲ. ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ ಎಂದು ತಿಳಿಸಿವೆ.
ಹನು ರಾಘವಪುಡಿ ಅವರು ಫೌಸಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಅದ್ಭುತ ನೃತ್ಯದ ಮೂಲಕವೇ ಗಮನ ಸೆಳೆದಿರುವ ರೀಲ್ಸ್ ರಾಣಿ ಇಮಾನ್ವಿ ಅವರು ಪ್ರಭಾಸ್‌ಗೆ ನಾಯಕಿಯಾಗಿ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಮಿಥುನ್ ಚಕ್ರವರ್ತಿ, ಅನುಪಮ್ ಖೇರ್, ಜಯಪ್ರದಾ, ಭಾನುಚಂದರ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಸಿನಿಮಾ ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬಂಗಾಳಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಇತ್ತೀಚೆಗೆ ತಿಳಿಸಿದೆ. ಅಷ್ಟೇ ಅಲ್ಲದೆ ನಟ ಪ್ರಭಾಸ್, ಸಂದೀಪ್ ರೆಡ್ಡಿ ವಂಗ ಅವರ ‘ಸ್ಪಿರಿಟ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.