ADVERTISEMENT

ಪಠಾಣ್ ವಿವಾದ: ಅಂಧಭಕ್ತರನ್ನು ಎಲ್ಲಿವರೆಗೆ ಸಹಿಸಿಕೊಳ್ಳಬೇಕು? ನಟ ಪ್ರಕಾಶ್ ರಾಜ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2022, 5:47 IST
Last Updated 15 ಡಿಸೆಂಬರ್ 2022, 5:47 IST
ಪಠಾಣ್
ಪಠಾಣ್    

ಬೆಂಗಳೂರು: ಬಾಲಿವುಡ್‌ ನಟ ಶಾರುಕ್ಖಾನ್‌ಪ್ರಮುಖ ಪಾತ್ರದಲ್ಲಿ ಇರುವ ‘ಪಠಾಣ್‌’ ಚಿತ್ರ ಬಿಡುಗಡೆಯ ಮುನ್ನವೇ ವಿವಾದದ ಅಲೆ ಎಬ್ಬಿಸಿದೆ.

ಶಾರುಕ್ ಖಾನ್ ಬಹುನಿರೀಕ್ಷಿತ ಪಠಾಣ್ ಸಿನಿಮಾದ ‘ಬೇಷರಮ್ ರಂಗ್’ ವಿಡಿಯೊ ಹಾಡು ಕಳೆದ ಸೋಮವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ ದೀಪಿಕಾ ಪಡುಕೋಣೆ ಅವರುಹಾಟ್ ಆಗಿ ಕಾಣಿಸಿಕೊಂಡು ಶಾರುಕ್ ಜೊತೆ ಸೊಂಟ ಬಳುಕಿಸುತ್ತಾ ಹೆಜ್ಜೆ ಹಾಕಿದ್ದಾರೆ.

ಅಲ್ಲದೇ ಹಾಡಿನ ಕೊನೆಯಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಹಾಕಿಕೊಂಡು ಕುಣಿದಿದ್ದಾರೆ. ಈ ಸನ್ನಿವೇಶ ಹಾಗೂ ಹಾಡಿಗೆ ಬೇಷರಮ್ ರಂಗ್ (ನಾಚಿಕೆಯಿಲ್ಲದ ಬಣ್ಣ)ಎಂದು ಹೆಸರಿಟ್ಟಿರುವುದು ಕೆಲವರನ್ನು ಕೆರಳಿಸಿದೆ. ‘ಹಿಂದೂ ಭಗವಾ ಧ್ವಜದ ಸಂಕೇತವಾದ ಕೇಸರಿ ಬಣ್ಣದ ಬಿಕಿನಿ ಧರಿಸಿ ಅದಕ್ಕೆ ಬೇಷರಮ್ ರಂಗ್ ಎಂದು ಹೆಸರಿಟ್ಟಿರುವುದು ಸರಿಯಲ್ಲ. ಈ ಚಿತ್ರವನ್ನು ಬಾಯ್ಕಾಟ್ ಮಾಡಬೇಕು’ ಎಂದು ಟ್ವಿಟರ್‌ನಲ್ಲಿ ಕೆಲವರು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

ADVERTISEMENT

ಈ ಕುರಿತು ಮಾತನಾಡಿರುವ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ‘ಶಾರುಕ್ ಖಾನ್ ಅವರ ಪಠಾಣ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಬೇಷರಮ್ ರಂಗ್ ಎಂದು ವಿಡಂಬನೆ ಮಾಡಿದ್ದಾರೆ. ಇದು ತೀವ್ರ ಖಂಡನಾರ್ಹ. ದೃಶ್ಯಕ್ಕೆ ಕತ್ತರಿ ಹಾಕದಿದ್ದರೇ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಪ್ರದರ್ಶನಗೊಳ್ಳಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ನರೋತ್ತಮ್ ಮಿಶ್ರಾ ಅವರ ಹೇಳಿಕೆಯನ್ನು ಉಲ್ಲೇಖಿಸಿ ವಿರೋಧ ವ್ಯಕ್ತಪಡಿಸಿರುವ ನಟ ಪ್ರಕಾಶ್ ರಾಜ್, ಇನ್ನೂ ಎಷ್ಟುದಿನ ನಾವು ಇಂತಹ ಅಂಧಭಕ್ತರನ್ನು ಸಹಿಸಿಕೊಳ್ಳಬೇಕು? ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ‘ಇಂತಹವರದು ಬಣ್ಣದ ಕುರುಡು’ ಎಂದು ವ್ಯಂಗ್ಯವಾಡಿದ್ದಾರೆ.

‘ಅಶ್ಲೀಲತೆ ಬೇಷರಮ್ ಹಾಡಿನಲ್ಲಿ ತುಂಬಿ ತುಳಕುತ್ತಿದೆ. ದೀಪಿಕಾ ಪಡುಕೋಣೆ ನಿರ್ಲಜ್ಜೆಯಿಂದ ತುಂಡುಬಟ್ಟೆ ಹಾಕಿ ಮೈ ಬಳುಕಿಸಿದ್ದಾರೆ. ಇದು ಹಿಂದೂ ಸಂಸ್ಕೃತಿಗೆ ವಿರುದ್ಧ’ ಎಂದು ಟ್ವಿಟರ್‌ನಲ್ಲಿ ಕೆಲವರು ಕಿಡಿಕಾರಿದ್ದಾರೆ.

ಆ್ಯಕ್ಷನ್‌–ಥ್ರಿಲ್ಲರ್‌ ಕಥೆ ಒಳಗೊಂಡಿರುವ 'ಪಠಾಣ್‌' ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ 2023ರ ಜನವರಿ 25ರಂದು ತೆರೆಗೆ ಬರಲಿದೆ. 2018ರಲ್ಲಿ ತೆರೆಕಂಡಿದ್ದ 'ಝೀರೊ' ಸಿನಿಮಾದ ನಂತರ ಶಾರುಕ್ಅಭಿನಯಿಸಿರುವ ಸಿನಿಮಾ ಪಠಾಣ್‌.

ಸಿದ್ಧಾರ್ಥ್‌ ಆನಂದ್‌ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ಶಾರುಕ್ಗೂಢಚಾರನ ಪಾತ್ರದಲ್ಲಿ ಅಭಿನಯಿಸಿದ್ದಾರೆ.ದೀಪಿಕಾ ಪಡುಕೋಣೆ ನಾಯಕಿಯಾಗಿದ್ದಾರೆ.ಜಾನ್‌ ಅಬ್ರಹಾಂ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನುಹಿಂದಿಯ ಸುದ್ದಿ ವಾಹಿನಿಗಳು ವರದಿ ಮಾಡಿರುವಂತೆ ‘ಪಠಾಣ್‌‘ ಸಿನಿಮಾದ ಒಟಿಟಿ ಪ್ರಸಾರದ ಹಕ್ಕುಗಳು ಸುಮಾರು ₹200 ಕೋಟಿಗೂ ಹೆಚ್ಚು ಮೊತ್ತಕ್ಕೆ ಮಾರಾಟವಾಗಿವೆ ಎನ್ನಲಾಗಿದೆ. ಆದಾಗ್ಯೂ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಪ್ರಕಟಿಸಿಲ್ಲ.

ಯಶ್‌ ರಾಜ್‌ ಬ್ಯಾನರ್‌ ಅಡಿ ಈ ಸಿನಿಮಾವನ್ನುನಿರ್ಮಾಣ ಮಾಡಲಾಗಿದೆ. ಈ ಸಂಸ್ಥೆಯವರು ತಮ್ಮ ಬಹುತೇಕ ಸಿನಿಮಾಗಳ ಒಟಿಟಿ ಪ್ರಸಾರ ಹಕ್ಕನ್ನು ‘ಅಮೆಜಾನ್ ಪ್ರೈಮ್‘ಗೆ ಮಾರಾಟ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.