ADVERTISEMENT

ನಟ ಪ್ರಥಮ್‌ಗೆ ಪೊಲೀಸ್ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 20:02 IST
Last Updated 18 ಆಗಸ್ಟ್ 2020, 20:02 IST
   

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ತರುವ ಪೋಸ್ಟ್ ಪ್ರಕಟಿಸಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ನಟ ಪ್ರಥಮ್ ಅವರಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಡಿ.ಜೆ.ಹಳ್ಳಿ ಗಲಭೆ ಸಂಬಂಧ ಮಹಿಳೆಯೊಬ್ಬರು ಮಾತನಾಡಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅದನ್ನು ಉಲ್ಲೇಖಿಸಿ ಪ್ರಥಮ ಪೋಸ್ಟ್ ಪ್ರಕಟಿಸಿದ್ದರು.

‘ಪ್ರಥಮ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿ ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರೊಬ್ಬರು ದೂರು ನೀಡಿದ್ದರು.

ADVERTISEMENT

ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಹಲಸೂರು ಗೇಟ್ ಠಾಣೆ ಪೊಲೀಸರು, 7 ದಿನದೊಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.