ಮನೆಯಲ್ಲಿ ಇರಲಿ ಅಥವಾ ಶೂಟಿಂಗ್ ಸೆಟ್‌ನಲ್ಲಿರಲಿ ಪ್ರತಿದಿನವೂ ದೈಹಿಕ ಕಸರತ್ತು ಮಾಡುವುದನ್ನು ‘ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ತಪ್ಪಿಸುವುದಿಲ್ಲ. ಫಿಟ್‌ನೆಸ್ ವಿಚಾರದಲ್ಲಿ ಅವರು ಇಂದಿಗೂ ಯುವಜನರಿಗೆ ಮಾದರಿ.
ಲಾಕ್‌ಡೌನ್ ಅವಧಿಯಲ್ಲಿ ಫಿಟ್‌ನೆಸ್‌ಗೆ ಸಂಬಂಧಿಸಿದ ವಿಡಿಯೊಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು. ಈಗ ಅವರು ಮತ್ತೊಂದು ವಿಡಿಯೊ ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ.
ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಯಾರಿಗೂ ಗೊತ್ತಾಗದಂತೆ ಪುನೀತ್ ಅವರು ಸೈಕಲ್‌ನಲ್ಲಿ ಬೆಂಗಳೂರಿನಲ್ಲಿ ಸುತ್ತಾಡಿದ್ದಾರೆ. ಈ ವಿಡಿಯೊವನ್ನು ಟ್ವಿಟರ್‌ನಲ್ಲಿಯೂ ಹಂಚಿಕೊಂಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಿಂದ ಅವರು ವಿಧಾನಸೌಧದವರೆಗೂ ಸೈಕಲ್ ಸವಾರಿ ಮಾಡಿರುವುದು ವಿಶೇಷ. ಈ ವಿಡಿಯೊ ತುಣುಕನ್ನು ಅವರು ಪಿಆರ್‌ಕೆ ಯೂಟ್ಯೂಬ್ ಚಾನೆಲ್‌ನಲ್ಲಿಯೂ ಹಂಚಿಕೊಂಡಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.